BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!
ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ.

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ.
2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.
ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



