ಪಕ್ಷ ವಿರೋಧಿ ಚಟುವಟಿಕೆ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದಲೇ ಅಬ್ದುಲ್ ಜಬ್ಬಾರ್ ಅಮಾನತು!
ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ (INC) ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
'ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿಯಾದ ವಿಧಾನ ಪರಿಷತ್ ಸದಸ್ಯ ಶ್ರೀ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಮೂಲಕ ಚುನಾವಣಾ ಸಂದರ್ಭದಲ್ಲಿ ಪಕ್ಷದ ನಿರ್ಧಾರಗಳನ್ನು ಮೀರಿ ನಡೆಯುವವರಿಗೆ ಪಕ್ಷವು ಎಚ್ಚರಿಕೆಯನ್ನು ನೀಡಿದೆ.
ಎಷ್ಟೇ ದೊಡ್ಡ ನಾಯಕರಾಗಿದ್ದರೂ ಪಕ್ಷದ ಶಿಸ್ತನ್ನು ಮೀರಿದರೆ ಕ್ರಮ ಅನಿವಾರ್ಯ ಎಂಬ ಸಂದೇಶವನ್ನು ಡಿ.ಕೆ. ಶಿವಕುಮಾರ್ ರವಾನಿಸಿದ್ದಾರೆ.
ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಅಬ್ದುಲ್ ಜಬ್ಬಾರ್ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿಚಾರವಾಗಿ ಕೆಪಿಸಿಸಿ ಶಿಸ್ತು ಸಮಿತಿಗೆ ದೂರುಗಳು ಸಲ್ಲಿಕೆಯಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



