ರಾಗಿ ಮುದ್ದೆ ಕೇವಲ ಆಹಾರವಲ್ಲ ಅದೊಂದು ಶಕ್ತಿ; ಮಾಜಿ ಪ್ರಧಾನಿ HD ದೇವೇಗೌಡರು ಅದನ್ನು ಫೇಮಸ್ ಮಾಡಿದರು: ಪ್ರಧಾನಿ ಮೋದಿ; Video
ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯಕ್ಕೆ ಬಂದಿರುವುದು ಈ ಭೇಟಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಂಡ್ಯ: ರಾಗಿ ಮುದ್ದೆ ಕೇವಲ ಆಹಾರವಲ್ಲ ಅದೊಂದು ಶಕ್ತಿ, ಮಂಡ್ಯದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಅದನ್ನು ಫೇಮಸ್ ಮಾಡಿದ್ದಾರೆ, ಯುವಕರು ರಾಗಿ ಮುದ್ದೆ ಹಾಗೂ ನವಧಾನ್ಯಗಳನ್ನು ಹೆಚ್ಚು ಸೇವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಹೆಚ್ ಡಿ ದೇವೇಗೌಡರ ಸಮ್ಮುಖದಲ್ಲಿಯೇ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯಕ್ಕೆ ಬಂದಿರುವುದು ಈ ಭೇಟಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.
ಕರ್ನಾಟಕದ ಮಣ್ಣಿನ ಗುಣವನ್ನು ಬಣ್ಣಿಸಿದ ಪ್ರಧಾನಿ, ಈ ಮಣ್ಣು ತತ್ವಜ್ಞಾನ ಮತ್ತು ತಂತ್ರಜ್ಞಾನ ಎರಡರಲ್ಲೂ ಸಮೃದ್ಧವಾಗಿದೆ. ಇಲ್ಲಿ ದರ್ಶನದ ಆಳವೂ ಇದೆ, ಟೆಕ್ನಾಲಜಿಯ ಶಕ್ತಿಯೂ ಇದೆ. ಆದಿಚುಂಚನಗಿರಿ ಮಠವು ಕಳೆದ ಎರಡು ಸಾವಿರ ವರ್ಷಗಳಿಂದ ಭಾರತದ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಜೀವಂತವಾಗಿರಿಸಿರುವ ಸಾಕ್ಷಾತ್ ರೂಪ ಎಂದರು.
ಬಾಲಗಂಗಾಧರನಾಥ ಶ್ರೀಗಳು ಕೇವಲ ಸಂತರಲ್ಲ, ಸಮಾಜದ ಬಂಧು ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಯವರನ್ನು ಸ್ಮರಿಸಿದ ಮೋದಿ, ಅವರು ಕೇವಲ ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಸೀಮಿತವಾಗಿರಲಿಲ್ಲ. ಗ್ರಾಮೀಣ ಭಾಗದಿಂದ ಬಂದಿದ್ದರಿಂದ ಅವರಿಗೆ ಹಳ್ಳಿಯ ಯುವಕರ ಆಕಾಂಕ್ಷೆ ಮತ್ತು ಸವಾಲುಗಳ ಅರಿವಿತ್ತು. ಭಕ್ತಿ ಎಂದರೆ ಸಮಾಜದಿಂದ ದೂರ ಹೋಗುವುದಲ್ಲ, ಸಮಾಜದ ಜವಾಬ್ದಾರಿ ತೆಗೆದುಕೊಳ್ಳುವುದು ಎಂದು ಅವರು ತೋರಿಸಿಕೊಟ್ಟರು. ಬಡ ಮಕ್ಕಳಿಗೆ ಎಂಜಿನಿಯರಿಂಗ್, ಮೆಡಿಕಲ್ ಶಿಕ್ಷಣ ನೀಡುವ ಮೂಲಕ ಅವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದು ಗುಣಗಾನ ಮಾಡಿದರು.
ಬೊಜ್ಜು, ಜೀವನಶೈಲಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ನಮ್ಮ ದೈನಂದಿನ ಜೀವನದಲ್ಲಿ ಉತ್ತಮ ಆಹಾರ, ಯೋಗವನ್ನು ಅಳವಡಿಸಿಕೊಳ್ಳಬೇಕು, ಜತೆಗೆ ಊಟದಲ್ಲಿ ಬಳಸುವ ಎಣ್ಣೆಯನ್ನು ಶೇ.10ರಷ್ಟು ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು. ಇದರ ಜತೆ ಡೊಮೆಸ್ಟಿಕ್ ಟೂರಿಸಂ, ಸ್ವಚ್ಛತೆ, ಆತ್ಮನಿರ್ಭರ ಭಾರತದ ಬಗ್ಗೆಯೂ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



