ರಾಜ್ಯ

ವಿಜಯಪುರ: ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಭೀಕರ ಹತ್ಯೆ!

ಅಲಿಯಬಾದ್‌ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ.

ವಿಜಯಪುರ: ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಭೀಕರ ಹತ್ಯೆ!
ರಾಜು ಬಾಪು ಖರೆ
Published On :

ವಿಜಯಪುರ: ರಿಯಲ್‌ ಎಸ್ಟೇಟ್‌ ಉದ್ಯಮಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಲಿಸುತ್ತಿದ್ದ ಜೀಪಿಗೆ ಟಿಪ್ಪರ್‌ ಡಿಕ್ಕಿ ಹೊಡೆಸಿ, ಬಳಿಕ ಗುಂಡು ಹೊಡೆದು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿರುವ ಘಟನೆ ನಗರ ಹೊರ ವಲಯದ ಅಲಿಯಾಬಾದ್‌ನಲ್ಲಿ ಮಂಗಳವಾರ ನಡೆದಿದೆ.

ಅಲಿಯಬಾದ್‌ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ, ಗೊಡಂದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರೆ (48) ದುಷ್ಕರ್ಮಿಗಳಿಂದ ಹತ್ಯೆಯಾದವರು. ಕೊಲೆಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಟಿಪ್ಪರ್​ನಲ್ಲಿ ಬಂದಿದ್ದ ದುಷ್ಕರ್ಮಿಗಳು ಮೊದಲು ಥಾರ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಬಳಿಕ ಟಿಪ್ಪರ್​ನಿಂದ ಇಳಿದ ಆರೋಪಿಗಳು ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಕಾರ್ ಡೋರ್ ಓಪನ್ ಆಗದಿದ್ದಕ್ಕೆ ಕಲ್ಲು ಎತ್ತಿ ಹಾಕಿದ್ದಾರೆ. ರಾಜು ಖರೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ವಿಜಯಪುರ ಎಸ್​ಪಿ ಲಕ್ಷ್ಮಣ ನಿಂಬರಗಿ ಹಾಗೂ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜು ಖರೆ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದರು. ಜೊತೆಗೆ ದ್ರಾಕ್ಷಿ ಕೃಷಿಕರಾಗಿದ್ದರು. ಕೌಟುಂಬಿಕ ಆಸ್ತಿ ವಿವಾದ ಇತ್ತು ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದರ ಕುರಿತು ತನಿಖೆಯಿಂದ ತಿಳಿಯಬೇಕಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.