ರಾಜ್ಯ

Sri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ? Video

ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.

Sri Guru Bhairavaikya Mandir: ಆದಿಚುಂಚನಗಿರಿಯಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ; ಏನಿದರ ವಿಶೇಷತೆ? Video
ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಭೈರವೈಕ್ಯ ಮಂದಿರ ಲೋಕಾರ್ಪಣೆಗೊಳಿಸಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
Published On :

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿದ್ದಾರೆ. ಬಾಲಗಂಗಾಧರನಾಥ ಸ್ವಾಮಿಗಳ ಗದ್ದುಗೆಯ ಸ್ಥಳದಲ್ಲಿ ನಿರ್ಮಿಸಲಾಗಿರುವ ಈ ಭವ್ಯ ದೇಗುಲವನ್ನು ಪ್ರಧಾನಿಗಳು ಉದ್ಘಾಟಿಸಿ, ಸ್ವಾಮಿಗಳ ಮೂರ್ತಿಗೆ ಪೂಜೆ ಸಲ್ಲಿಸಿದರು.

ಉದ್ಘಾಟನೆಯ ವೇಳೆ ಪ್ರಧಾನಿ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕೇಂದ್ರ ಸಚಿವರಾದ ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಅವರು ಉಪಸ್ಥಿತರಿದ್ದರು.

ಏನಿದರ ವಿಶೇಷತೆ?

ದ್ರಾವಿಡ, ಚಾಲುಕ್ಯ, ಹೊಯ್ಸಳ ಮತ್ತು ಗಂಗರ ಶೈಲಿಯ ವಿನ್ಯಾಸಗಳನ್ನು ಒಳಗೊಂಡಿರುವ ಈ ಮಂದಿರವು ಒಡಿಶಾದ ಸೂರ್ಯ ದೇವಾಲಯದ ನಿರ್ಮಾಣದಿಂದ ಪ್ರೇರಣೆ ಪಡೆದಿದೆ. ಸುಮಾರು ಹತ್ತು ವರ್ಷಗಳ ನಿರಂತರ ಪರಿಶ್ರಮದಿಂದ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಂದಿರವು ವಾಸ್ತುಶಿಲ್ಪಿ ಶಂಕರ್ ಸ್ಥಪತಿ ಅವರ ಮೇಲ್ವಿಚಾರಣೆಯಲ್ಲಿ ತಲೆಯೆತ್ತಿ ನಿಂತಿದೆ.

ಆದಿಚುಂಚನಗಿರಿ ಮಠದ 71ನೇ ಪೀಠಾಧ್ಯಕ್ಷರಾಗಿದ್ದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಯವರ ಸಮಾಧಿ ಸ್ಥಳವಾಗಿದೆ (ಲಿಂಗೈಕ್ಯರಾದ ಸ್ಥಳ). ಶ್ರೀಗಳು ಜನವರಿ 13, 2013ರಂದು ಲಿಂಗೈಕ್ಯರಾದರು. ಅವರ ದಿವ್ಯ ಸ್ಮರಣೆ ಹಾಗೂ ಭಕ್ತರ ದರ್ಶನಕ್ಕಾಗಿ ಅತ್ಯಂತ ಶ್ರದ್ಧೆಯಿಂದ ಈ ಭವ್ಯ ಮಂದಿರವನ್ನು ನಿರ್ಮಿಸಲಾಗಿದೆ.

ವಾಸ್ತುಶಿಲ್ಪದ ವೈಭವ; ಕಣ್ಮನ ಸೆಳೆಯುವ ಶಿಲ್ಪಕಲೆ

ಶ್ರೀ ಗುರುಭಾವೈಕ್ಯ ಮಂದಿರವು ಭಾರತೀಯ ವಾಸ್ತುಶಿಲ್ಪದ ಒಂದು ಅತ್ಯುತ್ತಮ ನಿದರ್ಶನವಾಗಿದೆ. ಇದು ಸಂಪೂರ್ಣವಾಗಿ ಕಲ್ಲಿನಿಂದ ಕೆತ್ತಲ್ಪಟ್ಟಿದ್ದು, ಅದ್ಭುತ ಶಿಲ್ಪಕಲೆಯನ್ನು ಒಳಗೊಂಡಿದೆ. ಮಂದಿರದ ಗರ್ಭಗುಡಿಯಲ್ಲಿ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಅಮೃತಶಿಲೆಯ ಭವ್ಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ನೋಡುವಾಗ ಗುರುಗಳು ನಮ್ಮ ಮುಂದೆಯೇ ಕುಳಿತಿದ್ದಾರೆ ಎಂಬ ಅನುಭವ ಭಕ್ತರಿಗಾಗುತ್ತದೆ. ಮಂದಿರದ ಒಳಗಿರುವ ಪ್ರಶಾಂತತೆಯು ಧ್ಯಾನ ಮತ್ತು ಆಧ್ಯಾತ್ಮಿಕ ಚಿಂತನೆಗೆ ಸೂಕ್ತವಾಗಿದ್ದು, ಇಲ್ಲಿಗೆ ಬರುವ ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ ದೊರೆಯುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.