Gold Smuggling Case: ನಟಿ ರನ್ಯಾ ರಾವ್ಗೆ ಬಿಗ್ ಶಾಕ್; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆ ಅಡಿ ರನ್ಯಾ ರಾವ್ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಹೊರಡಿಸಿದ್ದ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ.

ನವದೆಹಲಿ: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಬಿಗ್ ಶಾಕ್ ನೀಡಿದ್ದು, ಅವರ ಬಂಧನ ಆದೇಶವನ್ನು ಎತ್ತಿಹಿಡಿದಿದೆ.
ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆ ಅಡಿ ರನ್ಯಾ ರಾವ್ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಹೊರಡಿಸಿದ್ದ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ.
ಡಿಸೆಂಬರ್ 19, 2025 ರಂದು ಕರ್ನಾಟಕ ಹೈಕೋರ್ಟ್ ಸಹ ರನ್ಯಾ ರಾವ್ ಬಂಧನ ಆದೇಶವನ್ನು ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶದ ವಿರುದ್ಧ ರನ್ಯಾ ರಾವ್ ಅವರ ತಾಯಿ ಮತ್ತು ಮತ್ತೊಬ್ಬ ಆರೋಪಿ ಸಾಹಿಲ್ ಜೈನ್ ಅವರ ಸೋದರಸಂಬಂಧಿ ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿಗಳಾದ ಎಂ ಎಂ ಸುಂದ್ರೇಶ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ವಜಾಗೊಳಿಸಿದೆ.
ಸಂವಿಧಾನದ 22(3)(b) ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಆದೇಶವನ್ನು ಉಲ್ಲಂಘಿಸಿ ಬಂಧನ ಆದೇಶವನ್ನು ಹೊರಡಿಸಲಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧನ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ ಬಂಧಿತ ನಟಿಯ ತಾಯಿ ಹರ್ಷವರ್ಧಿನಿ ರಾವ್ ಕೋರಿದ್ದರು.
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.
ಕಳೆದ ಮಾರ್ಚ್ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



