ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ
ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಬೆಂಗಳೂರು: ದಾಬಸ್ಪೇಟೆ ಬಳಿ ಕಾರು ಓವರ್‌ಟೇಕಿಂಗ್ ವಿಚಾರಕ್ಕೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಪುತ್ರನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಸ್ಲಿಂ ಕುಟುಂಬದೊಂದಿಗಿನ ಗಲಾಟೆ ಪ್ರಕರಣದಲ್ಲಿ ಅಶುತೋಷ್ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಇಂದು ತಡೆ ನೀಡಿದೆ.
ಅಶುತೋಷ್ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಗಲಾಟೆ ಪ್ರಕರಣದಿಂದಾಗಿ ಅವರಿಗೆ ಪಾಸ್‌ಪೋರ್ಟ್ ಪಡೆಯಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ಕೈಬಿಡಿ ಎಂದು ಅನಂತಕುಮಾರ್ ಹೆಗಡೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅಶುತೋಷ್ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ ನೀಡಿ ಇಂದು ಆದೇಶ ಹೊರಡಿಸಿದೆ. ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ನಲ್ಲಿ ಅಶುತೋಷ್ ಹೆಸರಿಲ್ಲದಿದ್ದರೂ ದೋಷಾರೋಪಪಟ್ಟಿಯಲ್ಲಿ ಸೇರಿಸಲಾಗಿದೆ. ಘಟನೆಯಲ್ಲಿ ಅಶುತೋಷ್ ಪಾತ್ರವಿಲ್ಲ ಎಂದು ವಕೀಲ ಪವನ್ ಚಂದ್ರ ಶೆಟ್ಟಿ ವಾದ ಮಂಡಿಸಿದರು.
2025ರ ಜೂನ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ ಹಲ್ಲೆ, ಗೂಂಡಾಗಿರಿ ನಡೆಸಿದ ಆರೋಪ ಕೇಳಿಬಂದಿತ್ತು. ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್‌ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇನ್ನೋವಾ ಕಾರಿನಲ್ಲಿ ಸಲ್ಮಾನ್, ಸೈಫ್, ಇಲಿಯಾಜ್ ಖಾನ್ ಹಾಗೂ ಉನ್ನೀಸಾ ಎಂಬವರ ಮೇಲೆ ಹಲ್ಲೆ ಆರೋಪ ಕೇಳಿಬಂದಿತ್ತು. ಬಳಿಕ ಹಲ್ಲೆಗೊಳಗಾಗಿದ್ದ ಸೈಫ್ ನೀಡಿದ ದೂರಿನ ಮೇರೆಗೆ ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಅನಂತಕುಮಾರ್ ಹೆಗಡೆ A1, ಗನ್‌ಮ್ಯಾನ್ ಶ್ರೀಧರ್ A2, ಕಾರು ಚಾಲಕ ಮಹೇಶ್ A3 ಮತ್ತು ಇತರರ ವಿರುದ್ಧ ಬಿಎನ್ಎಸ್ ಕಾಯ್ದೆಯ 6 ಸೆಕ್ಷನ್‌ಗಳಡಿ ಎಫ್‌ಐಆರ್ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



