ಮಹಿಳಾ ನೌಕರರಿಗೆ ತಿಂಗಳಿಗೆ ಒಮ್ಮೆ ಕಡ್ಡಾಯ ಋತುಚಕ್ರ ರಜೆ ನೀಡಬೇಕು: ಹೈಕೋರ್ಟ್
ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ‘ಋತುಸ್ರಾವ ರಜೆ’ (Menstrual Leave) ನೀತಿಯನ್ನು ರಾಜ್ಯ ಸರ್ಕಾರವು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಋತುಚಕ್ರದ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ ಸಂಸ್ಥೆಗಳು ಆಕ್ಷೇಪವೆತ್ತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದನ್ನು ಸರಿಯಾದ ರೀತಿಯಲ್ಲಿ ಹಾಗೂ ಕಡ್ಡಾಯವಾಗಿ ಜಾರಿಗೆ ತರುವಂತೆ ಆದೇಶವನ್ನು ಹೈಕೋರ್ಟ್ ನೀಡಿದೆ.
ನೋಂದಾಯಿತ ಸಂಸ್ಥೆಗಳಲ್ಲಿ ಕೆಲಸ ಮಾಡುವ 18 ರಿಂದ 52 ವರ್ಷದೊಳಗಿನ ಎಲ್ಲಾ ಮಹಿಳಾ ನೌಕರರಿಗೆ ಈ ರಜೆ ಅನ್ವಯವಾಗುತ್ತದೆ. ಶಾಶ್ವತ, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಈ ವಿಸ್ತರಣೆ ಮಾಡಬೇಕು ಎಂದು ಹೇಳಿದೆ.ಕೇವಲ ಸಾಫ್ಟ್ವೇರ್ ಅಥವಾ ದೊಡ್ಡ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು, ದಿನಗೂಲಿ ನೌಕರರು ಸೇರಿದಂತೆ ಅಸಂಘಟಿತ ವಲಯದ ಮಹಿಳೆಯರಿಗೂ ಈ ಸೌಲಭ್ಯ ತಲುಪುವಂತೆ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ತಮಗೆ ರಜೆ ನೀಡುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಕೆಲವು ಉದ್ಯೋಗದಾತರ ಸಂಘಟನೆಗಳು ಈ ನೀತಿಯನ್ನು ವಿರೋಧಿಸಿದ್ದರೂ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಸಂಕೇತ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



