ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ: 'ಕರ್ನಾಟಕ ರೋಹಿತ್ ವೇಮುಲ' ಮಸೂದೆಗೆ ಸಚಿವ ಸಂಪುಟ ಅಸ್ತು
ರೋಹಿತ್ ವೇಮುಲ ಕಾಯ್ದೆ ಹೆಸರಿನ ಕಾನೂನು ಕರ್ನಾಟಕದಲ್ಲೂ ರೂಪಿಸಿ, ಜಾರಿಗೊಳಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಪತ್ರ ಬರೆದು ಆಗ್ರಹಿಸಿದ್ದರು.

ಬೆಂಗಳೂರು: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರ ಹಿಂದುಳಿದ ವರ್ಗಗಳು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ಮತ್ತು ಶಿಕ್ಷಣದ ಹಕ್ಕು ಕಲ್ಪಿಸುವ ಉದ್ದೇಶದಿಂದ ರೂಪಿಸಿರುವ ಕರ್ನಾಟಕ ರೋಹಿತ್ ವೇಮುಲ ಮಸೂದೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಕರ್ನಾಟಕ ರೋಹಿತ್ ವೇಮುಲ (ಬಹಿಷ್ಕಾರ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆಯನ್ನು ಸರ್ಕಾರ ರೂಪಿಸಿದೆ. ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು.
ಇದನ್ನು ಖಾತ್ರಿಪಡಿಸಲು ರೋಹಿತ್ ವೇಮುಲ ಕಾಯ್ದೆ ಹೆಸರಿನ ಕಾನೂನು ಕರ್ನಾಟಕದಲ್ಲೂ ರೂಪಿಸಿ, ಜಾರಿಗೊಳಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಹಿಂದೆ ಪತ್ರ ಬರೆದು ಆಗ್ರಹಿಸಿದ್ದರು.
ಎಸ್ಸಿ, ಎಸ್ಟಿ ವಿದ್ಯಾರ್ಥಿ ಎಂಬ ಕಾರಣಕ್ಕೆ ಲಿಖಿತ ಪರೀಕ್ಷೆ ಅಥವಾ ಭೌತಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗೆ ವೈವಾ ಅಥವಾ ಪ್ರಾಕ್ಟಿಕಲ್ ಪರೀಕ್ಷೆ ವೇಳೆ ಕಡಿಮೆ ಅಂಕ ನಿಡುವುದು ಸಹ ಜಾತಿ ತಾರತಮ್ಯ ಎಂದು ಪರಿಗಣಿಸಲು ಅವಕಾಶ ಕಲ್ಪಿಸಲಾಗಿದೆ.
ಇಂತಹ ಹಲವು ಅಂಶಗಳನ್ನು ಹೊಂದಿರುವ ವಿಧೇಯಕದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜಾತಿ ತಾರತಮ್ಯ ಮಾಡಿದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಸಮಾನತೆ ಸಮಿತಿ (ಈಕ್ವಿಟಿ ಕಮಿಟಿ) ರಚಿಸಿ ಪರಿಶೀಲನೆ ನಡೆಸಬೇಕು.
ಸಮಾನತೆ ಸಮಿತಿ ವರದಿ ನೀಡಿದ 30 ದಿನಗಳ ಒಳಗಾಗಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಉಂಟಾದರೆ ಸಂಸ್ಥೆಗೆ 10 ಲಕ್ಷ ರು. ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
ಇಂತಹ ಹಲವು ಅಂಶಗಳನ್ನು ಹೊಂದಿರುವ ವಿಧೇಯಕದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಜಾತಿ ತಾರತಮ್ಯ ಮಾಡಿದರೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಸಮಾನತೆ ಸಮಿತಿ (ಈಕ್ವಿಟಿ ಕಮಿಟಿ) ರಚಿಸಿ ಪರಿಶೀಲನೆ ನಡೆಸಬೇಕು. ಸಮಾನತೆ ಸಮಿತಿ ವರದಿ ನೀಡಿದ 30 ದಿನಗಳ ಒಳಗಾಗಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಉಂಟಾದರೆ ಸಂಸ್ಥೆಗೆ 10 ಲಕ್ಷ ರು. ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



