ಪ್ರೀತಿ ಹೆಸರಿನಲ್ಲಿ ಅಪ್ರಾಪ್ತ ಬಾಲಕಿಗೆ ವಂಚನೆ, ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 1.25 ರೂ ಲಕ್ಷ ದಂಡ..!
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.

ಕಲಬುರಗಿ: ಕಲಬುರಗಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ವಿಶೇಷ ಪೊಕ್ಸೋ) ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನಾಗೇಶ್ ಎಂಬ ಆರೋಪಿ ಅಪ್ರಾಪ್ತೆಯೊಂದಿಗೆ ಪ್ರೀತಿ ಹೆಸರಿನಲ್ಲಿ ಪರಿಚಯ ಬೆಳೆಸಿ, ಮದುವೆಯಾಗುವ ಭರವಸೆ ನೀಡಿದ್ದಾನೆ. ಬಳಿಕ ಬಾಲಕಿಯನ್ನು ತನ್ನೊಂದಿಗೆ ಬೆಂಗಳೂರಿಗೆ ಕರೆತಂದು, 56 ದಿನಗಳ ಕಾಲ ತನ್ನ ವಶದಲ್ಲಿಟ್ಟುಕೊಂಡಿದ್ದಾನೆ. ಈ ಅವಧಿಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.
ಅಪ್ರಾಪ್ತೆಯು ಕೊನೆಗೆ ಆರೋಪಿಯಿಂದ ತಪ್ಪಿಸಿಕೊಂಡು ತನ್ನ ಗ್ರಾಮಕ್ಕೆ ಮರಳಿ, ಪೋಷಕರಿಗೆ ನಡೆದ ಘಟನೆ ವಿವರಿಸಿದ್ದಾಳೆ. ಈ ಮಾಹಿತಿ ಆಧರಿಸಿ ಕುಟುಂಬದವರು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ತನಿಖೆ ವೇಳೆ ಅಧಿಕಾರಿಗಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಪೊಕ್ಸೋ ಕಾಯ್ದೆಯಡಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದರು.
ಪ್ರಾಸಿಕ್ಯೂಷನ್ ಪರ ವಕೀಲರು ನ್ಯಾಯಾಲಯದಲ್ಲಿ ಬಲವಾದ ವಾದ ಮಂಡಿಸಿ, ಆರೋಪಿಯ ವಿರುದ್ಧದ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಒದಗಿಸಿದರು.
ಅಪ್ರಾಪ್ತೆಯ ಹೇಳಿಕೆ, ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳು ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದವು.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ (ವಿಶೇಷ ಪೋಕ್ಸೋ) ನ್ಯಾಯಾಧೀಶ ಮೊಹಮ್ಮದ್ ಮುಜೀರ್ ಉಲ್ಲಾ ಸಿಜಿ ಅವರು ಬುಧವಾರ ತೀರ್ಪು ಪ್ರಕಟಿಸಿ, ನಾಗೇಶ್ ಅವರಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದರು.
ಇದಲ್ಲದೆ, ಪೀಡಿತ ಬಾಲಕಿಗೆ 3 ಲಕ್ಷ ರೂ. ಪರಿಹಾರವನ್ನು ಕಾನೂನು ಪ್ರಾಧಿಕಾರದಿಂದ ಒಂದು ತಿಂಗಳೊಳಗೆ ನೀಡುವಂತೆಯೂ ಆದೇಶಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



