ಯಾದಗಿರಿ: ಕಾರು-VRL ಬಸ್ ಮುಖಾಮುಖಿ ಡಿಕ್ಕಿ; 7 ಮಂದಿ ಸ್ಥಳದಲ್ಲೇ ಸಾವು; ಹೊತ್ತಿ ಉರಿದ ವಾಹನಗಳು; Video
ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.

ಯಾದಗಿರಿ: ಕಾರು ಮತ್ತು ವಿಆರ್ ಎಲ್ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ 7 ಜನ ಸಾವಿಗೀಡಾಗಿದ್ದಾರೆ.
ಅಪಘಾತದ ತೀವ್ರತೆಗೆ ವಾಹನ ನಡುರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡು ಹೊಗೆ ಆಕಾಶದೆತ್ತರಕ್ಕೆ ಚಾಚಿತ್ತು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.
ಅಪಘಾತದಲ್ಲಿ ಮೃತಪಟ್ಟವರನ್ನು ರಾಯಚೂರು ಜಿಲ್ಲೆ ಸಿರವಾರ ಪಟ್ಟಣದ ನಿವಾಸಿಗಳು ಎಂದು ಗುರುತಿಸಲಾಗಿದೆ. ಇಂದು ಅಮವಾಸ್ಯೆ ಹಿನ್ನೆಲೆ ತಿಂತನಿಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ನಡೆದಿದೆ.
ಕಾರಲ್ಲಿದ್ದ ಸರ್ಕಾರಿ ನೌಕರ ಶರಣಪ್ಪ, ಪುರಸಭೆ ಸದಸ್ಯ ಮಲ್ಲಿಕಾರ್ಜುನ್, ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



