ರಾಯಚೂರು: ಬಯಲು ನಾಟಕ ನೋಡುತ್ತಿದ್ದ ವೇಳೆ ಕಮಾನು ಕುಸಿತ; ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು
ಗ್ರಾಮದ ಸಮುದಾಯ ಭವನದ ಆವರಣದಲ್ಲಿ ನಿನ್ನೆ ರಾತ್ರಿ ಬಯಲಾಟ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಸಮುದಾಯ ಭವನದ ಮುಂಭಾಗದಲ್ಲಿ ಕುಳಿತು ಆಟ ವೀಕ್ಷಿಸುತ್ತಿದ್ದರು.

ರಾಯಚೂರು: ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ಸಂಭ್ರಮದಿಂದ ನಡೆಯುತ್ತಿದ್ದ ಬಯಲು ನಾಟಕ ದುರಂತದಲ್ಲಿ ಅಂತ್ಯ ಕಂಡಿದೆ. ನಾಟಕ ವೀಕ್ಷಿಸುತ್ತಿದ್ದ ವೇಳೆ ಹಳೆಯ ಕಮಾನಿನ ಗೋಡೆ ಕುಸಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಲಕ್ಷ್ಮಿ (18), ವಿಶಾಲಕ್ಷಿ (25), ಮತ್ತು ಮೂರು ವರ್ಷದ ಯಲ್ಲಮ್ಮ ಅವರ ಕಾಲು ಮುರಿದಿದ್ದು, ತಾಯಿ ಬಸ್ಸಮ್ಮ (45) ಅವರ ಸ್ಥಿತಿ ಚಿಂತಾಜನಕವಾಗಿದ್ದು ಕೋಮಾಗೆ ಜಾರಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.
ಗ್ರಾಮದ ಸಮುದಾಯ ಭವನದ ಆವರಣದಲ್ಲಿ ನಿನ್ನೆ ರಾತ್ರಿ ಬಯಲಾಟ ನಡೆಯುತ್ತಿತ್ತು. ಗ್ರಾಮಸ್ಥರೆಲ್ಲರೂ ಸಮುದಾಯ ಭವನದ ಮುಂಭಾಗದಲ್ಲಿ ಕುಳಿತು ಆಟ ವೀಕ್ಷಿಸುತ್ತಿದ್ದರು. ಈ ವೇಳೆ ಕಟ್ಟಡದ ಮೇಲ್ಭಾಗದಲ್ಲಿದ್ದ ಭಾರಿ ತೂಕದ ಸಿಮೆಂಟ್‌ನ ನಾಮಫಲಕ (ಬೋರ್ಡ್) ಇದ್ದಕ್ಕಿದ್ದಂತೆ ಕುಸಿದು ಕೆಳಗೆ ಕುಳಿತಿದ್ದವರ ಮೇಲೆ ಬಿದ್ದಿದೆ. ಕಟ್ಟಡದ ಕಳಪೆ ಕಾಮಗಾರಿಯೇ ಈ ದುರ್ಘಟನೆಗೆ ಕಾರಣ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಕಮಾನಿನ ಗೋಡೆಯೊಂದು ಏಕಾಏಕಿ ಕುಸಿದು ಅವರ ಮೇಲೆ ಬಿದ್ದಿದೆ. ಕಮಾನು ಬಿದ್ದ ಪರಿಣಾಮವಾಗಿ ದುರಾದೃಷ್ಟವಶಾತ್ ಎಂಟು ವರ್ಷದ ಬಾಲಕ ವಿಶ್ವನಾಥ ರಾಮಲಿಂಗ ಮತ್ತು ಕೇವಲ ಎರಡು ವರ್ಷದ ಪುಟ್ಟ ಮಗು ಸಾನ್ವಿತ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ದುರ್ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದಾರೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



