ಸಿಎಂ ಸಿದ್ದರಾಮಯ್ಯ ಆಪ್ತ ಸೈಫುಲ್ಲಾ ಸಾಬ್ ನಿಧನ
ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಜನಾಬ್ ಸೈಯದ್ ಸೈಫುಲ್ಲ ಸಾಬ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಅಲ್ಪಸಂಖ್ಯಾತ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ವಿಧಿವಶರಾಗಿದ್ದಾರೆ.
ಸೈಫುಲ್ಲಾ ಸಾಬ್ ಪತ್ನಿ ಫರ್ವೀಜ್ ಸೈಫುಲ್ಲಾ, ಐವರು ಹೆಣ್ಣು ಮಕ್ಕಳು, ಪುತ್ರ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಮೃತರಿಗೆ 79 ವರ್ಷ ವಯಸ್ಸಾಗಿತ್ತು.
ಮಿಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದ ಜನಾಬ್ ಸೈಯದ್ ಸೈಫುಲ್ಲ ಸಾಬ್, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
ಹಿನ್ನಲೆ
ಸೈಫುಲ್ಲಾ ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ರಾಜಕೀಯ
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಸ್ಪರ್ಧಿಸಿದ್ದ ಸೈಫುಲ್ಲಾ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು.
ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



