GBA ಅಂತಿಮ ಮತದಾರರ ಪಟ್ಟಿ ಪ್ರಕಟ: ಮತದಾರರ ಸಂಖ್ಯೆ 88,95,361ಕ್ಕೆ ಏರಿಕೆ; ಚುನಾವಣೆಗೆ ಸಿದ್ಧತೆ..!
ಒಟ್ಟು 369 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 45,71,169 ಪುರುಷ ಮತದಾರರು, 43,22,557 ಮಹಿಳಾ ಮತದಾರರು ಹಾಗೂ 1,635 ಇತರ ಮತದಾರರು ಸೇರಿದ್ದಾರೆ ಎಂದು ತಿಳಿಸಿದರು

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯಲ್ಲಿ ನಡೆಯಲಿರುವ ಬೆಂಗಳೂರು ನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದ ಅಂತಿಮ ಮತದಾರರ ಪಟ್ಟಿ ಶನಿವಾರ ಪ್ರಕಟವಾಗಿದ್ದು, ಒಟ್ಟು 88,95,361 ಮತದಾರರಿದ್ದಾರೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ತಿಳಿಸಿದ್ದಾರೆ.
ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 9 ರಂದು ಕರಡು ಪರಿಷ್ಕೃತ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗಿತ್ತು. ಅದರ ನಂತರ ತಿದ್ದುಪಡಿ ಮತ್ತು ಪರಿಶೀಲನೆ ಪೂರ್ಣಗೊಂಡು ಈಗ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ ಎಂದು ಹೇಳಿದರು.
ಒಟ್ಟು 369 ವಾರ್ಡ್‌ಗಳ ವ್ಯಾಪ್ತಿಯಲ್ಲಿ ಈ ಪಟ್ಟಿ ಸಿದ್ಧಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ 45,71,169 ಪುರುಷ ಮತದಾರರು, 43,22,557 ಮಹಿಳಾ ಮತದಾರರು ಹಾಗೂ 1,635 ಇತರ ಮತದಾರರು ಸೇರಿದ್ದಾರೆ ಎಂದು ತಿಳಿಸಿದರು. ಚುನಾವಣೆಗೆ ಒಟ್ಟು 8,023 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದೂ ಮಾಹಿತಿ ನೀಡಿದರು.
ಒಟ್ಟು 369 ವಾರ್ಡ್‌ಗಳಲ್ಲಿ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 51-ಸುಬ್ರಹ್ಮಣ್ಯಪುರ ಅತಿ ಹೆಚ್ಚು (53,660) ಮತದಾರರನ್ನು ಹೊಂದಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 24-ವಿಜ್ಞಾನನಗರ ಅತಿ ಕಡಿಮೆ (12,897) ಮತದಾರರನ್ನು ಹೊಂದಿರುತ್ತದೆ. ಅಂತಿಮ ಮತದಾರರ ಪಟ್ಟಿಯಲ್ಲಿ 2,833 ಮತದಾರರು ಹೆಚ್ಚಾಗಿದ್ದಾರೆ ಎಂದು ಹೇಳಿದರು.
ಮತದಾರರು ವಾರ್ಡ್‌ವಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಎಪಿಕ್ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಂಡು, ಖಚಿತಪಡಿಸಿಕೊಳ್ಳಬಹುದಾಗಿದೆ.
ಎಲ್ಲ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಹಾಗೂ ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಅವಶ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಂದು ವೇಳೆ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದಿದ್ದಲ್ಲಿ ಪೂರಕ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಿಕೂಳ್ಳಬಹುದು ಎಂದರು.
ಇದೇ ವೇಳೆ ಚುನಾವಣಾ ಪ್ರಕ್ರಿಯೆ ಸುಗಮವಾಗಿ ಮತ್ತು ದೋಷರಹಿತವಾಗಿ ನಡೆಯಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ಭರವಸೆ ನೀಡಿದರು.
ಮತದಾರರ ಸಹಾಯಕ್ಕಾಗಿ ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ವಲಯಗಳಿಗೆ ಸಂಬಂಧಿಸಿದ ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಲಾಗಿದೆ.
ಸಹಾಯವಾಣಿ ಸಂಖ್ಯೆಗಳು ಇಂತಿವೆ...
ಕೇಂದ್ರ: 080-22975803
ಉತ್ತರ: 080-22975936
ದಕ್ಷಿಣ: 9480685704
ಪೂರ್ವ: 9480685706
ಪಶ್ಚಿಮ: 9480685703
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



