ರಾಜ್ಯ ಸರ್ಕಾರದಿಂದ ಮಾಜಿ ಪ್ರಧಾನಿ ದೇವೇಗೌಡರಿಗೆ 1.2 ಕೋಟಿ ರೂ ಮೌಲ್ಯದ ವಿಶೇಷ ಕಾರು!
ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ ರಾಜ್ಯ ಸರ್ಕಾರ ವಿಶೇಷ ಕಾರು ಖರೀದಿಗೆ ಅನುಮತಿ ನೀಡಿದೆ.
ಸಿಎಂ, ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ ದೇವೇಗೌಡ ಪ್ರಸ್ತುತ ರಾಜ್ಯಸಭಾ ಸದಸ್ಯರಾಗಿದ್ದು, ಅವರಿಗೆ 1.2 ಕೋಟಿ ರೂಪಾಯಿ ಮೌಲ್ಯದ ದುಬಾರಿ ಕಾರು ಖರೀದಿಗೆ ಅನುಮತಿ ನೀಡಿ ಈ ಸಂಬಂಧ ಅಧಿಸೂಚನೆ ಪ್ರಕಟಿಸಿದೆ. ಐಷಾರಾಮಿ ಹಾಗೂ ಗರಿಷ್ಠ ಸುರಕ್ಷತೆಯ Volvo XC 90 (ವೋಲ್ವೋ ಎಕ್ಸ್‌ಸಿ 90 ) ಕಾರನ್ನು ದೇವೇಗೌಡ ಅವರಿಗೆ ನೀಡಲಾಗುತ್ತಿದೆ.
ಸರ್ಕಾರದ ಅಧಿಸೂಚನೆ
ಹೆಚ್.ಡಿ ದೇವೇಗೌಡರು ಇವರಿಗೆ VOLVO-XC90 ವಾಹನವನ್ನು ರೂ.1,25,65,388/-ಗಳ ವೆಚ್ಚದಲ್ಲಿ ಮೆ: Martial Motors Pvt. Ltd., ಬೆಂಗಳೂರು ಇವರಿಂದ ನೇರವಾಗಿ ಖರೀದಿಸಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ. ಉತ್ತಮ ಗುಣಮಟ್ಟದ ಸೇವೆಯನ್ನು ಸಮಂಜಸ ದರದಲ್ಲಿ ಸಂಗ್ರಹಿಸುವುದನ್ನು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ದೃಢಪಡಿಸಿಕೊಳ್ಳುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಈ ಕಾರು 2.0 ಲೀಟರ್ ಟರ್ಬೋ ಎಂಜಿನ್ ಹೊಂದಿದ್ದು, ಕಾರು ಮೈಲ್ಡ್ ಹೈಬ್ರಿಡ್ ಪವರ್‌ಟ್ರೇನ್ ಹೊಂದಿದೆ. 250 hp ಪವರ್ ಹಾಗೂ 360 Nm ಪೀಕ್ ಟಾರ್ಕ್ ಸಾಮರ್ಥ್ಯ ಹೊಂದಿದೆ.
ದೇವೇಗೌಡರಿಗಾಗಿ ಕೆಲವು ಬದಲಾವಣೆ
ಇನ್ನು ಈ ಕಾರನ್ನು ಮಾಡಿಫಿಕೇಶನ್ ಮಾಡಲು ಸಾಧ್ಯವಿದೆ. ಸದ್ಯ ದೇವೇಗೌಡರಿಗೆ ಕಾರು ಹತ್ತಿ ಇಳಿಯಲು, ಕಾರಿನಲ್ಲಿ ಕುಳಿತುಕೊಳ್ಳಲು ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



