ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ತಂದಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ.

ಬೆಂಗಳೂರು: ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷ ಎಂದಿಗೂ ವಿರೋಧ ಮಾಡಿಲ್ಲ. ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಸಂವಿಧಾನದ 73,74 ನೇ ತಿದ್ದುಪಡಿಗಳನ್ನು ರಾಜೀವ್ ಗಾಂಧಿಯವರು ಪ್ರಧಾನ ಮಂತ್ರಿಯಾಗಿದ್ದಾಗ ತಂದಿದ್ದರು. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದು ಬಿಜೆಪಿ ಎಂದಿಗೂ ಒತ್ತಾಯಿಸಿಲ್ಲ. ಈಗ ಮಾತ್ರ ಮಹಿಳಾ ಮೀಸಲಾತಿಗೆ ಒತ್ತಾಯಿಸಿ ರಾಜಕೀಯ ಮಾಡುತ್ತಿದ್ದಾರೆಂದು ಕಿಡಿಕಾರಿದರು.
ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತದೆ. ದಕ್ಷಿಣದಲ್ಲಿ 50% ಮಾಡಿದರೆ ಉತ್ತರ ಪ್ರದೇಶದಲ್ಲಿ 80 ಸ್ಥಾನಗಳಿವೆ. ಅಲ್ಲಿಗೆ 120 ಸ್ಥಾನಗಳಾಗುತ್ತವೆ. ಕರ್ನಾಟಕದಲ್ಲಿ 42 ಸ್ಥಾನಗಳಾಗುತ್ತವೆ. ಉತ್ತರ ಭಾರತದಲ್ಲಿ ಸ್ಥಾನಗಳು ಹೆಚ್ಚಾಗುವುದರ ಬಗ್ಗೆ ನಮ್ಮ ವಿರೋಧವೇ ಹೊರತು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ. ನಾವು ಮಹಿಳಾ ಮೀಸಲಾತಿ ಪರವಾಗಿದ್ದೇವೆ. ಸಂವಿಧಾನ ತಿದ್ದುಪಡಿಗೆ ಮೂರನೇ ಎರಡರಷ್ಟು ಬಹುಮತ ಲೋಕಸಭೆಯಲ್ಲಿ ಇರಬೇಕು. 50% ರಾಜ್ಯಗಳು ಇದಕ್ಕೆ ಒಪ್ಪಿಗೆ ನೀಡಬೇಕು. ಕ್ಷೇತ್ರ ಮರು ವಿಂಗಡಣೆಗೆ ವಿರೋಧ ಮಾಡಿದ್ದೇವೆ ಹೊರತು ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಹಸಿಹಸಿ ಸುಳ್ಳು ಹೇಳುತ್ತಿದ್ದಾರೆ. ತಮಿಳುನಾಡು, ಪಶ್ಚಿಮ ಬಂಗಾಳದ ಚುನಾವಣೆ ಇರುವುದರಿಂದ ನಮ್ಮನ್ನು ಮಹಿಳಾ ಮೀಸಲಾತಿ ವಿರೋಧಿಗಳು ಎಂದು ಬಿಂಬಿಸಿ,ರಾಜಕೀಯ ಲಾಭ ಪಡೆಯುವುದು ಅವರ ಉದ್ದೇಶವಾಗಿದೆ. 2023ರಲ್ಲೇ 450 ಮತಗಳನ್ನು ಪಡೆದು ಅಂಗೀಕಾರವಾಗಿರುವ ಮಸೂದೆಯನ್ನು ನರೇಂದ್ರ ಮೋದಿಯವರು ಏಕೆ ಜಾರಿಮಾಡಲಿಲ್ಲ? ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಸೂದೆ ತಂದಿದ್ದರೆ, ಯಾರೂ ವಿರೋಧಿಸುತ್ತಿರಲಿಲ್ಲ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



