ಬೆಳಗಾವಿ: ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ಗಾಡಿ, ಇಬ್ಬರ ದುರ್ಮರಣ; ನೂರಾರು ಕೋಳಿಗಳ ಸಾವು
ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಾವಿ: ನಿಂತಿದ್ದ ಟ್ರಕ್‌ಗೆ ಕೋಳಿ ಸಾಗಿಸುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ನೂರಾರು ಕೋಳಿಗಳು ಮೃತಪಟ್ಟಿವೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಾಸಿಂ (28) ಮತ್ತು ಮುಬಾರಕ್ (22) ಎಂದು ಗುರುತಿಸಲಾಗಿದೆ. ವಾಹನದ ಚಾಲಕ ಬಸವರಾಜ ಈರಪ್ಪ ಹಂಚಿನಮನಿ (37) ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ವಾಹನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಕು ಸಾಕಾಣಿಕೆ ವಾಹನವು ಕೊಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆಯ ಸೊರಬಗೆ ಕೋಳಿ ಸಾಗಣೆ ಮಾಡುತ್ತಿತ್ತು.
ಅಪಘಾತದಲ್ಲಿ ಹಲವಾರು ಕೋಳಿಗಳು ಸಾವನ್ನಪ್ಪಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಗೊಂಡವರು ಮತ್ತು ಮೃತರ ಶವಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



