ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುವುದು ಮೂಢನಂಬಿಕೆ; ಈ ಮೌಢ್ಯದಲ್ಲಿ ನನಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ
ಮೃತರ ಕುಟುಂಬ ಸದಸ್ಯರಿಗೆ ಕಾಯಂ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಸಂತ್ರಸ್ತ ಕುಟುಂಬಗಳ 5 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಂತಾಯಿತು.

ಚಾಮರಾಜನಗರ: 2021ರಲ್ಲಿ ಕೊರೊನಾ ಸೋಂಕಿನ 2ನೇ ಅಲೆಯ ವೇಳೆ ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೊನೆಗೂ ಸರ್ಕಾರಿ ನೌಕರಿ ಸಿಕ್ಕಿದೆ.
ಮಂಗಳವಾರ ಗುಂಡ್ಲುಪೇಟೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬ ಸದಸ್ಯರಿಗೆ ಕಾಯಂ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಸಂತ್ರಸ್ತ ಕುಟುಂಬಗಳ 5 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಂತಾಯಿತು.
2021 ಮೇ 2 ರ ರಾತ್ರಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 34 ಮಂದಿ ಕೋವಿಡ್ ರೋಗಿಗಳು ಆಮ್ಲಜನಕದ ಕೊರತೆಯಿಂದಾಗಿ ಮೃತಪಟ್ಟಿದ್ದರು. ಸಂತ್ರಸ್ತ ಕುಟುಂಬದ ಸದಸ್ಯರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಕಳೆದ 5 ವರ್ಷಗಳಿಂದಲೂ ಹೋರಾಟ ನಡೆಸಿದ್ದರು.
ಬಿಜೆಪಿ ಸರ್ಕಾರದ ನಂತರ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇವರೆಲ್ಲರಿಗೂ ಸರ್ಕಾರಿ ಹುದ್ದೆ ನೇಮಕಾತಿಯ ಭರವಸೆ ನೀಡಿತ್ತು. ಅದರಂತೆ ಗುಂಡ್ಲುಪೇಟೆಯಲ್ಲಿ ಮಂಗಳವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಆಕ್ಸಿಜನ್ ದುರಂತ ಸಂತ್ರಸ್ತ 25 ಕುಟುಂಬಗಳ ಸದಸ್ಯರಿಗೆ ಕಾಯಂ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ್ದಾರೆ.
ಭಾರತ್ ಜೋಡೋ ಪಾದಯಾತ್ರೆಯ ಸಂದರ್ಭ ರಾಹುಲ್ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎನ್ನುವುದು ಒಂದು ಮೌಢ್ಯ. ಇಂತಹ ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆಯಿಲ್ಲ. ಹಾಗಾಗಿ ಚಾಮರಾಜನಗರಕ್ಕೆ ಸಾಕಷ್ಟು ಬಾರಿ ಭೇಟಿ ನೀಡುತ್ತಿದ್ದೇನೆ. ಇಲ್ಲಿಗೆ ಬಂದರೆ ಕುರ್ಚಿ ಗಟ್ಟಿಯಾಗುತ್ತದೆ ಎಂದು ಪ್ರಾಸಂಗಿಕವಾಗಿ ಹೇಳಿದ್ದೆ ಅಷ್ಟೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಸರ್ಕಾರ ಆಕಸ್ಮಿಕ ಸಾವುಗಳಿಗೆ ನೀಡುವ ಪರಿಹಾರದ ಬಗ್ಗೆ ತಪ್ಪು ಕಲ್ಪನೆಯಿಂದ ಪತ್ರ ಬರೆದಿದ್ದಾರೆ. ಎಲ್ಲರಿಗೂ ಪರಿಹಾರ ನೀಡಲಾಗುತ್ತಿದೆ, ನಮ್ಮ ಗಮನಕ್ಕೆ ಬಂದರೆ ಪರಿಹಾರ ನೀಡುತ್ತೇವೆ. ಶಾಸಕರು ಕೇಳಿದರೂ ಖಂಡಿತ ಕೊಡುತ್ತೇವೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತ ಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



