ರಾಜ್ಯ

ಅಪ್ಪ-ಅಮ್ಮನಿಗೆ ಒಳ್ಳೆ ಮಗ ಆಗಲಿಲ್ಲ; ಒಳ್ಳೆಯ ಹೆಸರು ತರೋದಕ್ಕೆ ಬಿಡ್ತಿಲ್ಲ; ನನ್ನ ತಂದೆ ಹ್ಯಾರಿಸ್ ಅವರ ಟಾರ್ಗೆಟ್: ಮೊಹಮದ್ ನಲಪಾಡ್

ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಪ್ಪ-ಅಮ್ಮನಿಗೆ ಒಳ್ಳೆ ಮಗ ಆಗಲಿಲ್ಲ; ಒಳ್ಳೆಯ ಹೆಸರು ತರೋದಕ್ಕೆ ಬಿಡ್ತಿಲ್ಲ; ನನ್ನ ತಂದೆ ಹ್ಯಾರಿಸ್ ಅವರ ಟಾರ್ಗೆಟ್: ಮೊಹಮದ್ ನಲಪಾಡ್
ಮೊಹಮದ್ ನಲಪಾಡ್
Published On :

ಬೆಂಗಳೂರು: ಇಡಿ ದಾಳಿ ನನ್ನ ಹಾಗೂ ನನ್ನ ತಮ್ಮನ ಮೇಲೆ ಆಗಿರೋದು, ಈ ದಾಳಿಗೂ ಹ್ಯಾರಿಸ್‌ಗೂ ಯಾವುದೇ ಸಂಬಂಧ ಇಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ಮೊಹಮದ್ ನಲಪಾಡ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಒಬ್ಬ ಒಳ್ಳೆಯ ಮಗನಂತೂ ಆಗಕ್ಕೆ ಆಗಿಲ್ಲ. ಯಾವಾಗಲೂ ನನ್ನ ತಂದೆ ತಾಯಿಗೆ ನನ್ನಿಂದ ಕೆಟ್ಟದ್ದೇ ಆಗಿರೋದು ಎಂದು ಭಾವುಕರಾಗಿ ಹೇಳಿದ್ದಾರೆ. ಯೂತ್ ಕಾಂಗ್ರೆಸ್ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿ, ಪೋಷಕರಿಗೆ ಒಳ್ಳೆಯ ಹೆಸರು ತರಲು ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ತಮ್ಮ ತಂದೆಯಂತೆ ಉತ್ತಮ ಮಗನಾಗಿ ಬಾಳಲು ಪ್ರಯತ್ನಿಸುತ್ತಿದ್ದರೂ, ಪ್ರತಿ ಬಾರಿ ಇಂತಹ ಕೇಸುಗಳನ್ನು ಇಟ್ಟುಕೊಂಡು ತಮ್ಮನ್ನು ಮತ್ತು ತಮ್ಮ ಕುಟುಂಬವನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ತಂದೆ ಸಚಿವ ಸ್ಥಾನ ಪಡೆಯುವುದನ್ನು ತಡೆಯಲು ರಾಜಕೀಯ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೊಹಮ್ಮದ್ ಹಾರಿಸ್ ನಲಪಾಡ್ ಅವರ ಪ್ರಕಾರ, ಇಡಿ ಅಧಿಕಾರಿಗಳು ಅವರ ಕುಟುಂಬದ ನಿವಾಸಕ್ಕೆ ಬಂದಿದ್ದು, ತಾವು ಎನ್.ಎ. ಹ್ಯಾರಿಸ್ ಅವರ ಮಕ್ಕಳು ಮತ್ತು ಆ ಮನೆಯಲ್ಲಿ ವಾಸಿಸುತ್ತಿರುವುದರಿಂದ ಮಾತ್ರ. ಈ ಪ್ರಕರಣಕ್ಕೂ ಮತ್ತು ನಮ್ಮ ತಂದೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ.

2021 ರಲ್ಲಿ ಇಸಿಐಆರ್ (ECIR) ದಾಖಲಾಗಿತ್ತಾದರೂ, ದಾಳಿಯನ್ನು ಐದು-ಆರು ವರ್ಷಗಳ ನಂತರ, ಅಂದರೆ 2026 ರಲ್ಲಿ ನಡೆಸಲು ಅಧಿಕಾರಿಗಳು ಬಂದಿರುವುದನ್ನು ಅವರು ಪ್ರಶ್ನಿಸಿದ್ದಾರೆ. “ಯಾರಾದರೂ ಅಪರಾಧ ಮಾಡಿದರೆ, ಆರು ವರ್ಷಗಳ ಕಾಲ ಸಾಕ್ಷ್ಯಗಳನ್ನು ಇಟ್ಟುಕೊಂಡು ಮನೆ ಶೋಧ ಮಾಡಲು ಕಾಯುತ್ತಾರಾ?” ಎಂದು ನಲಪಾಡ್ ಪ್ರಶ್ನಿಸಿದ್ದಾರೆ.

ಈ ದಾಳಿಯು ತಮ್ಮ ತಂದೆಗೆ ಮಂತ್ರಿ ಸ್ಥಾನ ಸಿಗದಂತೆ ತಡೆಯಲು ಮತ್ತು ಅವರ ಮೇಲೆ ಗೂಬೆ ಕೂರಿಸುವ ಉದ್ದೇಶದಿಂದ ನಡೆದಿದೆ ಎಂದು ನಲಪಾಡ್ ಆರೋಪಿಸಿದ್ದಾರೆ. ಇದು ರಾಜಕೀಯ ಪ್ರೇರಿತವಾಗಿದ್ದು, ಆಡಳಿತಾರೂಢ ಬಿಜೆಪಿಯವರು ತಮ್ಮ ಕುಟುಂಬವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.