SSLC Results: ಈ ಬಾರಿ ಮೂರನೇ ಪರೀಕ್ಷೆ ಇಲ್ಲ; ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ವಿವರ ಹೀಗಿದೆ...
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ.

ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಇಂದು ಗುರುವಾರ ಪ್ರಕಟವಾಗಿದೆ. ಈ ಬಾರಿ SSLC ಪರೀಕ್ಷೆಯಲ್ಲಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಎಂದಿನಂತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ 7 ವಿದ್ಯಾರ್ಥಿಗಳು 625ರಲ್ಲಿ 625 ಅಂಕ ಪಡೆದಿದ್ದಾರೆ. ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ, ರಾಯಚೂರಿನ ಸುಖದೇವ್ 625ರಲ್ಲಿ 625 ಅಂಕ ಪಡೆದವರಾಗಿದ್ದಾರೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ
ಎಸ್ಎಸ್ಎಲ್ಸಿ ಪರೀಕ್ಷೆ ಬರೆದ 7,70,209 ವಿದ್ಯಾರ್ಥಿಗಳ ಪೈಕಿ 7,24,794 ಮಕ್ಕಳು ತೇರ್ಗಡೆಯಾಗಿದ್ದಾರೆ. ಶೇ 96.18ರಷ್ಟು ಬಾಲಕಿಯರು, ಶೇ 91.94ರಷ್ಟು ಬಾಲಕರು ಪಾಸಾಗಿದ್ದಾರೆ. 3,92,922 ಬಾಲಕಿಯರ ಪೈಕಿ 3,77,922 ಬಾಲಕಿಯರು ತೇರ್ಗಡೆಯಾಗಿದ್ದಾರೆ. 3,77,287 ಬಾಲಕರ ಪೈಕಿ 3,46,872 ಬಾಲಕರು ತೇರ್ಗಡೆ ಹೊಂದಿದ್ದಾರೆ.
ಈ ಬಾರಿ ಎರಡೇ ಪರೀಕ್ಷೆ
ಈ ಬಾರಿ ದ್ವಿತೀಯ ಪಿಯುಸಿಯಂತೆ ಉತ್ತಮ ಫಲಿತಾಂಶ ಬಂದಿರುವುದರಿಂದ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು. ಮೇ 18 ರಿಂದ ಮೇ 25 ರ ವರೆಗೆ ಎರಡನೇ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಅಥವಾ ಸಂದೇಹವಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡುತ್ತದೆ. ಇದಕ್ಕಾಗಿ ಮಂಡಳಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ (Scanned Copy), ಮರುಎಣಿಕೆ (Re-counting) ಮತ್ತು ಮರುಮೌಲ್ಯಮಾಪನ (Re-evaluation) ಪ್ರಕ್ರಿಯೆಗಳಿಗಾಗಿ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ವಿದ್ಯಾರ್ಥಿಗಳು ತಾವು ಬರೆದ ಉತ್ತರಗಳಿಗೆ ಮೌಲ್ಯಮಾಪಕರು ಎಷ್ಟು ಅಂಕಗಳನ್ನು ನೀಡಿದ್ದಾರೆ ಮತ್ತು ಯಾವುದೇ ಉತ್ತರ ಮೌಲ್ಯಮಾಪನವಾಗದೆ ಉಳಿದಿದೆಯೇ ಎಂದು ತಿಳಿಯಲು ಸ್ಕ್ಯಾನ್ ಪ್ರತಿಯನ್ನು ಪಡೆಯಬಹುದು.
ಸಾಮಾನ್ಯ ಅರ್ಜಿ ಅವಧಿ; ಏಪ್ರಿಲ್ 23, 2026 ರಿಂದ ಏಪ್ರಿಲ್ 26, 2026 ರವರೆಗೆ.
ದಂಡ ಶುಲ್ಕದೊಂದಿಗೆ ಅವಧಿ; ಏಪ್ರಿಲ್ 27 ರಿಂದ ಏಪ್ರಿಲ್ 28 ರವರೆಗೆ (ಪ್ರತಿ ದಿನಕ್ಕೆ ₹100 ದಂಡ ಇರುತ್ತದೆ).
ಶುಲ್ಕ; ಕರ್ನಾಟಕ-ಒನ್ ಅಥವಾ ಆನ್‌ಲೈನ್ ಮೂಲಕ ಪ್ರತಿ ವಿಷಯಕ್ಕೆ ₹410 ನಿಗದಿಪಡಿಸಲಾಗಿದೆ. ಆಫ್‌ಲೈನ್ ಕೇಂದ್ರಗಳಲ್ಲಿ ಸೇವಾ ಶುಲ್ಕ ಸೇರಿ ಇದು ₹420 ಆಗಬಹುದು.
ಬೆಂಗಳೂರು-ಒನ್ / ಕರ್ನಾಟಕ-ಒನ್ ಕೇಂದ್ರಗಳು: ನೇರವಾಗಿ ಕೇಂದ್ರಕ್ಕೆ ಭೇಟಿ ನೀಡಿ ಹಣ ಪಾವತಿಸಬಹುದು. ಇಲ್ಲಿ ಹೆಚ್ಚುವರಿ ಸೇವಾ ಶುಲ್ಕದೊಂದಿಗೆ ಕ್ರಮವಾಗಿ 420 ರೂ. ಮತ್ತು 820 ರೂ. ಪಾವತಿಸಬೇಕಾಗುತ್ತದೆ.
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಸ್ಕ್ಯಾನ್ ಪ್ರತಿಯನ್ನು ಪಡೆಯುವುದು ಕಡ್ಡಾಯವಾಗಿರುತ್ತದೆ. ನಿಗದಿತ ದಿನಾಂಕದ ನಂತರ ಬರುವ ಯಾವುದೇ ಅರ್ಜಿಗಳನ್ನು ಮಂಡಳಿಯು ಪುರಸ್ಕರಿಸುವುದಿಲ್ಲ. ಒಮ್ಮೆ ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ.ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ನೋಂದಣಿ ಸಂಖ್ಯೆ ಮತ್ತು ವಿಷಯದ ಕೋಡ್ ನ್ನು ಸರಿಯಾಗಿ ನಮೂದಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



