ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಎಲ್ಲಾ ಆಸ್ಪತ್ರೆಗಳಲ್ಲಿ ಹೀಟ್ ಸ್ಟ್ರೋಕ್ ವಾರ್ಡ್ ಕಡ್ಡಾಯ
ಶಾಖ-ಸಂಬಂಧಿತ ಕಾಯಿಲೆಗಳ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿ ಹೊರಡಿಸಲಾದ ಸುತ್ತೋಲೆಯಲ್ಲಿ, 2026 ಸೇರಿದಂತೆ, ಮಾರ್ಚ್ 1 ರಿಂದ ಜುಲೈ 31 ರವರೆಗೆ ಈ ಸೌಲಭ್ಯಗಳನ್ನು ಪ್ರತಿ ವರ್ಷವೂ ಕಾರ್ಯಗತಗೊಳಿಸಬೇಕು ಎಂದು ಹೇಳಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ತೀವ್ರ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಆಸ್ಪತ್ರೆಗಳಲ್ಲಿ ಪ್ರತ್ಯೇಕ 'ಹೀಟ್ ಸ್ಟ್ರೋಕ್ ವಾರ್ಡ್' ಆರಂಭಿಸುವಂತೆ ರಾಜ್ಯ ಸರ್ಕಾರ ಶುಕ್ರವಾರ ನಿರ್ದೇಶನ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯವು ಹೊರಡಿಸಿದ ಸುತ್ತೋಲೆಯಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳು ಎರಡು ಹಾಸಿಗೆಗಳ ಹೀಟ್ ಸ್ಟ್ರೋಕ್ ವಾರ್ಡ್, ತಾಲ್ಲೂಕು ಆಸ್ಪತ್ರೆಗಳು ಐದು ಹಾಸಿಗೆಯ ಹೀಟ್ ಸ್ಟ್ರೋಕ್ ವಾರ್ಡ್ ಮತ್ತು ಜಿಲ್ಲಾ ಆಸ್ಪತ್ರೆಗಳು 10 ಹಾಸಿಗೆಗಳನ್ನು ಹೀಟ್ ಸ್ಟ್ರೋಕ್ ವಾರ್ಡ್ ಅನ್ನು ಮೀಸಲಿಡಬೇಕು ಎಂದು ಹೇಳಿದೆ.
ಶಾಖ-ಸಂಬಂಧಿತ ಕಾಯಿಲೆಗಳ ರಾಷ್ಟ್ರೀಯ ಕ್ರಿಯಾ ಯೋಜನೆಯಡಿಯಲ್ಲಿ ಹೊರಡಿಸಲಾದ ಸುತ್ತೋಲೆಯಲ್ಲಿ, 2026 ಸೇರಿದಂತೆ, ಮಾರ್ಚ್ 1 ರಿಂದ ಜುಲೈ 31 ರವರೆಗೆ ಈ ಸೌಲಭ್ಯಗಳನ್ನು ಪ್ರತಿ ವರ್ಷವೂ ಕಾರ್ಯಗತಗೊಳಿಸಬೇಕು ಎಂದು ಹೇಳಲಾಗಿದೆ.
ಎಲ್ಲಾ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ಶಾಖ-ಸಂಬಂಧಿತ ಕಾಯಿಲೆಗಳ(HRI) ನಿರ್ವಹಣೆಗೆ ತರಬೇತಿ ಪಡೆಯಲು ಸೂಚಿಸಲಾಗಿದೆ.
ಎಲ್ಲಾ ಆರೋಗ್ಯ ಸಂಸ್ಥೆಗಳು ORS ಕಾರ್ನರ್ ಗಳನ್ನು ಸ್ಥಾಪಿಸಲು ಮತ್ತು ಫ್ಯಾನ್‌ಗಳು, ಐಸ್ ಕ್ಯೂಬ್‌ಗಳು ಹಾಗೂ ಥರ್ಮಾಮೀಟರ್‌ಗಳಂತಹ ಅಗತ್ಯ ಸೌಲಭ್ಯಗಳೊಂದಿಗೆ ಹೀಟ್ ಸ್ಟ್ರೋಕ್ ನಿರ್ವಹಣಾ ಕೊಠಡಿಗಳನ್ನು ಸಜ್ಜುಗೊಳಿಸಲು ಸಹ ನಿರ್ದೇಶಿಸಿದೆ.
ಸಮಗ್ರ ಆರೋಗ್ಯ ಮಾಹಿತಿ ವೇದಿಕೆ(IHIP) ಮೂಲಕ HRI ಪ್ರಕರಣಗಳ ಕುರಿತು ದೈನಂದಿನ ವರದಿಗಳನ್ನು ಸಲ್ಲಿಸಲು ಎಲ್ಲಾ ಹಂತದ ಎಲ್ಲಾ ಆರೋಗ್ಯ ಸೌಲಭ್ಯಗಳಿಗೆ ಸೂಚನೆ ನೀಡಲಾಗಿದೆ ಎಂದು ಸುತ್ತೋಲೆ ತಿಳಿಸಿದೆ.
ಹೆಚ್ಚುತ್ತಿರುವ ತಾಪಮಾನದ ನಡುವೆ ಹೀಟ್ ಸ್ಟ್ರೋಕ್ ಗೆ ಸಂಬಂಧಿಸಿದ ತೊಂದರೆಗಳು ಮತ್ತು ಸಾವುಗಳನ್ನು ತಡೆಗಟ್ಟುವ ಗುರಿಯನ್ನು ಈ ಕ್ರಮಗಳು ಹೊಂದಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



