ಸಚಿವ ಡಿ ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಕೆ
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ ಎಂದು ತಿಳಿದುಬಂದಿದೆ.
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.
ಶ್ವಾಸಕೋಶ ಕಸಿ ನಡೆಸಲು ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಡಿ ಸುಧಾಕರ್ ಅವರಿಗೆ ಲಂಗ್ಸ್ ಟ್ರಾನ್ಸ್ ಪ್ಲಾಂಟೇಷನ್ ಸರ್ಜರಿ ಮಾಡಲು ವೈದ್ಯರು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಡಾ.ವೆಂಕಟಗಿರಿ ನೇತೃತ್ವದಲ್ಲಿ ಶ್ವಾಸಕೋಶ ಕಸಿ ಸರ್ಜರಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



