ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಟೆಂಡರ್; ಇಬ್ಬರು IAS ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ; ಹೈಕೋರ್ಟ್ ಮೆಟ್ಟಿಲೇರಿದ ಗುತ್ತಿಗೆದಾರರು!
ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು,

ಬೆಂಗಳೂರು: ಘನತ್ಯಾಜ್ಯ ನಿರ್ವಹಣಾ ಪ್ಯಾಕೇಜ್ಗಳಿಗೆ ಟೆಂಡರ್ ಪ್ರಕ್ರಿಯೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಜಿಬಿಎ ಟೆಂಡರ್ ಪ್ರಕ್ರಿಯೆ ತೆರವುಗೊಳಿಸಲು ಶೇ.15 ರಷ್ಟು ಕಮಿಷನ್ ಗೆ ಇಬ್ಬರು ಐಎಎಸ್ ಅಧಿಕಾರಿಗಳು ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎನ್. ಬಾಲಸುಬ್ರಮಣ್ಯಂ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ನಿರ್ದೇಶನಗಳನ್ನು ಕೋರಿ ಕರ್ನಾಟಕ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿದ್ದು, ಈ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ನಾಳೆಗೆ (ಏಪ್ರಿಲ್ 24) ಮುಂದೂಡಿದೆ.
ಗುತ್ತಿಗೆದಾರ ಎಸ್.ಎನ್. ಬಾಲಸುಬ್ರಮಣಿಯನ್, ಸಿ.ವಿ. ರಾಮನ್ ನಗರ ಪ್ಯಾಕೇಜ್-1ರ ಟೆಂಡರ್ನಲ್ಲಿ ಎಲ್1 ಬಿಡ್ದಾರರಾಗಿದ್ದರು. ಆದರೆ, ಜಿಬಿಎ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅಧಿಕಾರಿ ಕರಿಗೌಡ ಸರ್ಕಾರದ ಪರವಾಗಿ ಒಟ್ಟು ಗುತ್ತಿಗೆ ಮೊತ್ತದ ಶೇ. 15ರಷ್ಟು ಲಂಚ ನೀಡುವಂತೆ ಒತ್ತಡ ಹೇರಿದ್ದಾರೆ ಮತ್ತು ಹಣ ನೀಡದಿದ್ದರೆ ಟೆಂಡರ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದರು.
ಲಂಚ ನೀಡಲು ಒಪ್ಪದ ಕಾರಣ ಮಾರ್ಚ್ 26ರಂದು ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಇನ್ನು ಸರ್ಕಾರದ ಪರವಾಗಿ ವಾದ ಮಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಗುತ್ತಿಗೆದಾರರ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಾರ್ಚ್ 10ರಂದು ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ, ಆದರೆ ಅಂದು ಅವರು ಬೆಂಗಳೂರಿನಲ್ಲಿ ಇರಲಿಲ್ಲ, ದೆಹಲಿಯಲ್ಲಿದ್ದರು. ಅದಕ್ಕೆ ಪೂರಕವಾಗಿ ವಿಮಾನ ಪ್ರಯಾಣದ ಬೋರ್ಡಿಂಗ್ ಪಾಸ್ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಹಿರಿಯ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿರುವುದಕ್ಕೆ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.
ಅರ್ಜಿದಾರರು ವಿವರಣೆ ನೀಡಲು ಕೇಳಿದಾಗ, ತುಷಾರ್ ಗಿರಿನಾಥ್ ಅವರನ್ನು ಒಳಗೊಂಡ ಮಂಡಳಿಯ ನೀತಿಯ ಪ್ರಕಾರ, ಟೆಂಡರ್ಗಳನ್ನು ಅಂತಿಮಗೊಳಿಸಲು, ಏಳು ವರ್ಷಗಳ ಕಾಲ ಬಿಡ್ ಬೆಲೆಯ ಶೇ. 3 ರಷ್ಟನ್ನು ಮಂಡಳಿಯ ಸದಸ್ಯರಿಗೆ ಪಾವತಿಸಬೇಕು ಎಂದು ಕರೀ ಗೌಡ ಹೇಳಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ಬಿಡ್ ಬೆಲೆಯ ಶೇ. 3 ರಷ್ಟನ್ನು ತುಷಾರ್ ಗಿರಿನಾಥ್ ಮತ್ತು ಅವರ ನಗರಾಭಿವೃದ್ಧಿ ಇಲಾಖೆಯಲ್ಲಿರುವವರಿಗೆ ಮತ್ತು ಬಿಡ್ ಬೆಲೆಯ ಶೇ. 9 ರಷ್ಟು ಹಣವನ್ನು ಸರ್ಕಾರದ ಕೆಲವು ಜನರಿಗೆ ಎಂದು ಪಾವತಿಸಬೇಕು ಅದಾದ ನಂತರ ಟೆಂಡರ್ಗಳನ್ನು ಅಂತಿಮಗೊಳಿಸಲು ಮತ್ತು ಕೆಲಸದ ಆದೇಶಗಳನ್ನು ನೀಡಲಾಗುತ್ತದೆ ಎಂದು ಆರೋಪಿಸಲಾಗಿದೆ.
ಇದರಿಂದ ಕೋಪಗೊಂಡ ಅರ್ಜಿದಾರರು ಮಾರ್ಚ್ 11 ರಂದು ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದರು. ಏತನ್ಮಧ್ಯೆ, ಬಿಎಸ್ಡಬ್ಲ್ಯೂಎಂಎಲ್ನ ಮುಖ್ಯ ಪ್ರಧಾನ ವ್ಯವಸ್ಥಾಪಕರು (ಸಿಜಿಎಂ) ಮಾರ್ಚ್ 25 ರಂದು ಶೇಕಡಾವಾರು ಪ್ರಮಾಣವನ್ನು 15% ರಿಂದ 9% ಕ್ಕೆ ಇಳಿಸಲಾಗಿದೆ ಎಂದು ಅರ್ಜಿದಾರರಿಗೆ ತಿಳಿಸಿದರು. ಅದೇ ಸಂಜೆ, ಫಾರ್ಮಾಲಿಟಿಸ್ ಮತ್ತು ಆಕ್ಷೇಪಗಳನ್ನು ಪೂರೈಸಲು ಸಕಾರಾತ್ಮಕವಾಗಿ ಪ್ರತಿಕ್ರಿಯಿಸದ ಕಾರಣ ಟೆಂಡರ್ಗಳನ್ನು ರದ್ದುಗೊಳಿಸುವಂತೆ ಕರೀಗೌಡ ಅವರಿಗೆ ನಿರ್ದೇಶನ ನೀಡಿದ್ದಾರೆ ಎಂದು ದೂರಲಾಗಿದೆ.
ಅದರಂತೆ, ಜುಲೈ 30, 2025 ರಂದು ಟೆಂಡರ್ಗಳನ್ನು ರದ್ದುಗೊಳಿಸಲಾಯಿತು. ಆಕ್ಷೇಪಾರ್ಹ ಅಧಿಸೂಚನೆಯನ್ನು ಮಾರ್ಚ್ 25 ರಂದು ಹೊರಡಿಸಲಾಯಿತು ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಕರೀ ಗೌಡ ಮತ್ತು ತುಷಾರ್ ಗಿರಿನಾಥ್ ಅವರ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲು ಮುಖ್ಯ ಕಾರ್ಯದರ್ಶಿಗೆ ನಿರ್ದೇಶನಗಳನ್ನು ನೀಡಬೇಕೆಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




