ಶಾಸಕ ಲಕ್ಷ್ಮಣ್ ಸವದಿ ಕಣ್ಣೆದುರೇ ಆಪ್ತ ಅಕಾಲಿಕ ನಿಧನ..!
ಕಾರ್ಯಕ್ರಮ ನಡೆಯುತ್ತಿರುವ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗದ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದೆ. ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಸಹಾಯಕ ರಾವಸಾಬ ಬೇವನೂರ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ.
ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಬೇವನೂರ ಭಾಗವಹಿಸಿದ್ದರು.
ಕಾರ್ಯಕ್ರಮ ನಡೆಯುತ್ತಿರುವ ವೇಳೆ ಇದ್ದಕ್ಕಿದ್ದಂತೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದರೂ, ಮಾರ್ಗದ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅಥಣಿ ತಾಲೂಕಿನ ಶಿವನೂರ ಗ್ರಾಮದ ನಿವಾಸಿಯಾಗಿದ್ದ ರಾವಸಾಬ ಬೇವನೂರ, ಹಾಲುಮತ ಸಮಾಜದ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದರು.
ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಅವರು, ಸ್ಥಳೀಯ ರಾಜಕೀಯ ವಲಯದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿದ್ದರು. ಈ ದುರ್ಘಟನೆ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಬೆಂಬಲಿಗರಲ್ಲಿ ತೀವ್ರ ಆಘಾತ ಮೂಡಿಸಿದೆ.
ತಮ್ಮ ಆಪ್ತ ಸಹಾಯಕನನ್ನು ಕಣ್ಣೆದುರೇ ಕಳೆದುಕೊಂಡ ಘಟನೆ ಅವರಿಗೆ ಭಾರೀ ನೋವುಂಟು ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೇವನೂರ ಅವರ ಅಕಾಲಿಕ ನಿಧನದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರದೇಶದ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಅವರ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



