ರಾಜ್ಯ

ಮದ್ಯಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಮೇ 1ರಿಂದ ರಾಜ್ಯದಲ್ಲಿ ಅಬಕಾರಿ ದರ ಪರಿಷ್ಕರಣೆ ಸಾಧ್ಯತೆ

ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ.

ಮದ್ಯಪ್ರಿಯರಿಗೆ ಸರ್ಕಾರ ಬಿಗ್ ಶಾಕ್: ಮೇ 1ರಿಂದ ರಾಜ್ಯದಲ್ಲಿ ಅಬಕಾರಿ ದರ ಪರಿಷ್ಕರಣೆ ಸಾಧ್ಯತೆ
ಲಿಕ್ಕರ್
Published On :

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ.

ಹೊಸ ಎಐಬಿ (AIB) ನೀತಿ?

ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ (Alcohol-in-Beverage) ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಮದ್ಯದಲ್ಲಿ ಆಲ್ಕೋಹಾಲ್ ಅಂಶ ಹೆಚ್ಚಿದ್ದಷ್ಟೂ ತೆರಿಗೆ ಹೆಚ್ಚಾಗಲಿದೆ. ಈ ಹೊಸ ನೀತಿಯಿಂದಾಗಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಮದ್ಯದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ 20ರಷ್ಟು ಏರಿಕೆಯಾಗಲಿದೆ.

ಮದ್ಯಪ್ರಿಯರ ಆಕ್ರೋಶ

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.