ರಾಜ್ಯ

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!

ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

ಆಟೋ ಸೈಡ್‌ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!
ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ
Published On :

ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಹೋದರಿಬ್ಬರ ಮೇಲೆ ಮುಸ್ಲಿಂ ಸಹೋದರರು ಸೇರಿಕೊಂಡು ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಶನಿವಾರ ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.

ಈ ವೇಳೆ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರಾದ ಸೈಫಾಬ್ ಒಂಟಿ, ಆರಿಫ್, ಆಸಿಫ್, ಇಮ್ರಾನ್ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಜಮೀರ್ ಹಾಗೂ ಅವರ ಸಹೋದರು ಸುನೀಲ್ ಸಹೋದರರ ಮೇಲೆ ಕಟ್ಟಿಗೆಯಿಂದ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ಈ ಸಂಬಂಧ ಹಲ್ಲೆಗೊಳಗಾದ ತೋಟೆಂದ್ರ ಮತ್ತು ಸುನಿಲ್ ಕುಟುಂಬಸ್ಥರು ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ಹಲ್ಲೆ ಮಾಡಿದ ಆಟೋ ಮಾಲೀಕ ಸೈಯದ್ ಜಮೀರ್ ಹಾಗೂ ಆತನ ಸಹೋದರರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.