ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿ
ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಮಾಡಿದ್ದಾರೆ.

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ತಮಗೆ ವಿಧಿಸಿರುವ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ಗೆ ಮೇಲ್ಮನವಿಯನ್ನ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಮಾಡಿದ್ದಾರೆ.
ಜೀವಾವಧಿ ಶಿಕ್ಷೆ ಆದೇಶವನ್ನು ರದ್ದುಪಡಿಸುವಂತೆ ತಮ್ಮ ಅರ್ಜಿಯಲ್ಲಿ ವಿನಯ್ ಕುಲಕರ್ಣಿ ಕೋರಿದ್ದಾರೆ. ತಮಗೆ ಶಿಕ್ಷೆ ವಿಧಿಸಿರುವುದರಿಂದ ಶಾಸಕ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿರುವ ಕಾರಣ, ಶಿಕ್ಷೆಗೆ ತಕ್ಷಣ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಮುಂದಿನ ವಾರ ನಡೆಯುವ ಸಾಧ್ಯತೆ ಇದೆ. ಈ ವಿಚಾರಣೆಯ ವೇಳೆ ಸಿಬಿಐ ವಾದವನ್ನೂ ನ್ಯಾಯಾಲಯ ಆಲಿಸುವ ನಿರೀಕ್ಷೆಯಿದೆ.
ತೀರ್ಪು ಪ್ರಕಟವಾದ 90 ದಿನಗಳಲ್ಲಿ ತೀರ್ಪನ್ನು ಅಮಾನತಿನಲ್ಲಿ ಇಡದೇ ಹೋದರೆ ಶಾಸಕ ಸ್ಥಾನ ಅನರ್ಹ ಆಗುವ ಭಯದಲ್ಲಿ ವಿನಯ್ ಕುಲಕರ್ಣಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣ ಹಿನ್ನೆಲೆ
2016ರ ಜೂನ್ ತಿಂಗಳಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆಯಾಗಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿ ಒಟ್ಟು 21 ಮಂದಿ ಮೇಲೆ ಆರೋಪ ಕೇಳಿ ಬಂದಿತ್ತು. ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಬಿಐ ಚಾರ್ಜ್ಶೀಟ್ ಸಲ್ಲಿಸಿತ್ತು.
ಸೋಮಶೇಖರ್ ನ್ಯಾಮಗೌಡ ಹಾಗೂ ವಾಸುದೇವ್ ನಿಲೇಕಣಿಯನ್ನ ಕೋರ್ಟ್ ಖುಲಾಸೆಗೊಳಿತ್ತು. ಇಬ್ಬರು ನಿರ್ದೋಷಿಗಳನ್ನ ಬಿಟ್ಟು ಉಳಿದವರನ್ನು ಸಿಬಿಐ ವಶಕ್ಕೆ ಪಡೆದಿತ್ತು. ಬಳಿಕ ಬೌರಿಂಗ್ ಆಸ್ಪತ್ರೆಯಲ್ಲಿ 17 ಅಪರಾಧಿಗಳ ವೈದ್ಯಕೀಯ ಪರೀಕ್ಷೆ ನಡೆಸಿ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು. ಬಳಿಕ ಆದೇಶ ಪ್ರಕಟಿಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



