ರಾಜ್ಯ

ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; 9.60 ಲಕ್ಷ ರೂ ದಂಡ!

2020ರಲ್ಲಿ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪನ್ನು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; 9.60 ಲಕ್ಷ ರೂ ದಂಡ!
ಸಾಂದರ್ಭಿಕ ಚಿತ್ರ
Published On :

ಬೆಳಗಾವಿ: 2020ರಲ್ಲಿ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪನ್ನು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗಂಗಾಧರ ಕೆ. ಅವರು, ಆರೋಪಿಗಳಾದ ಲಕ್ಷ್ಮಣ ದಡ್ಡಿ, ಸವೀನ ದಡ್ಡಿ, ಬಸವರಾಜ ದಡ್ಡಿ ಮತ್ತು ಬಸವಣ್ಣಿ ನಾಯಕನನ್ನು ದೋಷಿಗಳೆಂದು ತೀರ್ಪು ನೀಡಿದ್ದಾರೆ. ಆರೋಪಿಗಳಿಗೆ ಜೀವಾವಧಿ ಶಿಕ್ಷೆಯ ಜೊತೆಗೆ ಒಟ್ಟು 9.60 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ. ಈ ದಂಡದ ಮೊತ್ತದಲ್ಲಿ 8 ಲಕ್ಷ ರೂಪಾಯಿಯನ್ನು ಮೃತ ಶಹಬಾಜ್ ಪಠಾಣ್ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡಲು ಮತ್ತು 1.60 ಲಕ್ಷ ರೂಪಾಯಿಯನ್ನು ದೂರುದಾರರಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ.

2020ರಲ್ಲಿ ತನ್ನ ಸ್ನೇಹಿತನ ಜನ್ಮದಿನದ ಕಾರ್ಯಕ್ರಮ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಆರೋಪಿಗಳು ಟಾಟಾ ಸುಮೋ ವಾಹನದಿಂದ ಶಹಬಾಜ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಪ್ರಾಣ ಉಳಿಸಿಕೊಳ್ಳಲು ಸಮೀಪದ ನಿವೃತ್ತ ಡಿವೈಎಸ್ಪಿ ಮನೆಗೆ ಓಡಿ ಹೋಗಿದ್ದರೂ ಅಲ್ಲಿಗೆ ಹೋದ ಆರೋಪಿಗಳು ಮಾರಕಾಸ್ತ್ರಗಳಿಂದ ಕ್ರೂರವಾಗಿ ದಾಳಿ ನಡೆಸಿ ಶಹಬಾಜ್ ಅವರನ್ನು ಹತ್ಯೆಗೈದಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.