ಚಿತ್ರದುರ್ಗ: KSRTC ಬಸ್ ಪಲ್ಟಿ, 15 ಪ್ರಯಾಣಿಕರಿಗೆ ಗಾಯ; Video
ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಸಮೀಪ ಮಂಗಳವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಹದಿನೈದಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಈ ಬಸ್ ಹೆಗ್ಗರೆ ಗ್ರಾಮದ ಸಮೀಪ ಬರುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗರೆ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಹದಿನೈದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬಸ್ ಚಾಲಕನಿಗೆ ಮುಂಜಾನೆ ವೇಳೆ ನಿದ್ದೆಯ ಮಂಪರು ಆವರಿಸಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಹದಿನೈದಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


