ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ: ಚೇತನ್ ಗೆ ನಿಖಿಲ್ ಖಡಕ್ ತಿರುಗೇಟು!
ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.

ಬೆಂಗಳೂರು: ಕನ್ನಡದ ವರನಟ, ಪದ್ಮಭೂಷಣ ದಿವಂಗತ ಡಾ.ರಾಜ್‌ಕುಮಾರ್ ಅವರ ಸಮಾಧಿ ಪ್ರಶ್ನಿಸುವ ಮೂಲಕ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.
ಅಣ್ಣಾವ್ರ ಹೆಸರು ಹೇಳಲು ಯೋಗ್ಯರಲ್ಲ ಎಂಬ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಚೇತನ್, ಚುನಾವಣೆಯಲ್ಲಿ ಮೂರು ಬಾರಿ ಸೋತವರಿಗೆ ಯೋಗ್ಯತೆ ಇದೆಯಾ? ಎಂದು ಕೇಳಿದ್ದರು.ಇದಕ್ಕೆ ಇದೀಗ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ. ಅಣ್ಣಾವ್ರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ. ಹೆಸರಿನಲ್ಲಿ ಅಹಿಂಸೆ ಇರಬಹುದು, ಆದರೆ ನಿಮ್ಮ ಪ್ರತಿಯೊಂದು ಮಾತೂ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ” ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಟ ಚೇತನ್ ಅಹಿಂಸಾ ಅವರಿಗೆ ಖಡಕ್ ತಿರುಗೇಟು ನೀಡಿದ್ದಾರೆ.
ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ವ್ಯಕ್ತಿತ್ವದ ಬಗ್ಗೆ ಟೀಕಿಸುವ ಮೊದಲು ಇತಿಹಾಸ ತಿಳಿದುಕೊಳ್ಳಿ” ಎಂದು ಸಲಹೆ ನೀಡಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜವಾದರೂ ಅವುಗಳಿಗೆ ಒಂದು ಘನತೆ ಇರಬೇಕು” ಎಂದ ಅವರು, ನಮ್ಮ ಕುಟುಂಬದ ಮೇಲಿನ ವೈಯಕ್ತಿಕ ದಾಳಿ ಅಥವಾ ಸೋಲು-ಗೆಲುವಿನ ಮಾತುಗಳನ್ನು ನಾವು ಸದಾ ವಿನಮ್ರತೆಯಿಂದಲೇ ಸ್ವೀಕರಿಸುತ್ತೇವೆ ಎಂದು ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಅಂತಿಮ ತೀರ್ಪುಗಾರರು ಜನರೇ ಹೊರತು, ಸಮಾಜದಲ್ಲಿ ದ್ವೇಷ ಬಿತ್ತುವ ವ್ಯಕ್ತಿಗಳಲ್ಲ. ಸಂಸ್ಕಾರ ಮನೆಯಿಂದ ಬರಬೇಕು, ಟೀಕೆಗಳು ಜನರ ಪ್ರೀತಿಯ ಅಡಿಪಾಯದ ಮೇಲಿರಬೇಕು. ಕೇವಲ ಪ್ರಚಾರದ ಹಪಾಹಪಿಯಿಂದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಮ್ಮ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



