ರಾಜ್ಯ

ಮಾತನಾಡಲು ಯಾರು ಯೋಗ್ಯರು? ಮೂರು ಬಾರಿ ಸೋತವರಾ ಅಥವಾ 'ಸ್ಮಾರಕ ಪಾಲಿಟಿಕ್ಸ್' ಶುರು ಮಾಡಿ 'ಫ್ಯಾನ್ ವಾರ್ಸ್' ಪ್ರೇರೇಪಿಸಿದವರಾ?

ಮಾಜಿ ಪ್ರಧಾನಿಯ ಮಗ-2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ?

ಮಾತನಾಡಲು ಯಾರು ಯೋಗ್ಯರು? ಮೂರು ಬಾರಿ ಸೋತವರಾ ಅಥವಾ 'ಸ್ಮಾರಕ ಪಾಲಿಟಿಕ್ಸ್' ಶುರು ಮಾಡಿ 'ಫ್ಯಾನ್ ವಾರ್ಸ್' ಪ್ರೇರೇಪಿಸಿದವರಾ?
ಚೇತನ್ ಅಹಿಂಸಾ ಮತ್ತು ನಿಖಿಲ್ ಕುಮಾರಸ್ವಾಮಿ
Published On :

ಬೆಂಗಳೂರು: ಹಿರಿಯ ನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ವಿಚಾರವಾಗಿ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರ ಹೇಳಿಕೆಗೆ ನಟ ಚೇತನ್‌ ಅಹಿಂಸಾ ಕಿಡಿ ಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ತಿರುಗೇಟು ನೀಡಿರುವ ಚೇತನ್‌, ಪ್ರಜಾಪ್ರಭುತ್ವದಲ್ಲಿ ನಾವೆಲ್ಲರೂ ಮಾತನಾಡಲು ಯೋಗ್ಯರೇ. ಆದರೆ, ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಚೇತನ್ ಅಹಿಂಸಾ ಹೇಳಿದ್ದಿಷ್ಟು:

ಪ್ರಜಾಪ್ರಭುತ್ವದಲ್ಲಿ ಯಾರು ಮಾತನಾಡಲು ‘ಯೋಗ್ಯ’?

ಮಾಜಿ ಪ್ರಧಾನಿಯ ಮಗ—2006ರಲ್ಲಿ ಅವಕಾಶವಾದಿ ‘ಸ್ಮಾರಕ ಪಾಲಿಟಿಕ್ಸ್’ ಶುರು ಮಾಡಿ ಕನ್ನಡ ಚಲನಚಿತ್ರರಂಗದ ಅಭಿಮಾನಿಗಳ ನಡುವೆ ಅದಕ್ಕೆ ಸಂಬಂಧಪಟ್ಟ ‘ಫ್ಯಾನ್ ವಾರ್ಸ್’ ಪ್ರೇರೇಪಿಸಿದವರಾ?

ಅಥವಾ ಅವರ ಮಗ— ಮೂರು ಬಾರಿ ಸೋತವರು—ಸ್ವಜನಪಕ್ಷಪಾತ ಹೊರತುಪಡಿಸಿ ಮತ್ತೇನು ಸಾಧನೆ ಇಲ್ಲದವರಾ? ಪ್ರಜಾಪ್ರಭುತ್ವದಲ್ಲಿ ನಾವು ಎಲ್ಲರೂ ಮಾತನಾಡಲು ಯೋಗ್ಯರೇ. ಆದರೆ ಯಾರ ಮಾತಿಗೆ ನಿಜವಾದ ತೂಕ ಇದೆ ಅನ್ನುವುದನ್ನು ಜನರೇ ತೀರ್ಮಾನಿಸುತ್ತಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಜಾಗದ ವಿಚಾರವಾಗಿ ಚೇತನ್ ಅವರು ಎತ್ತಿದ್ದ ಆಕ್ಷೇಪಕ್ಕೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದ ನಿಖಿಲ್‌, ‘ಅಣ್ಣಾವ್ರ ಬಗ್ಗೆ ಮಾತನಾಡಲು ಚೇತನ್‌ಗೆ ಯೋಗ್ಯತೆ ಇಲ್ಲ’ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.