ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ: ಮೋಜು ಮಸ್ತಿಗೆ ತೆರಳಿದ್ದ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸಾವು! Video
ಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.

ಉಡುಪಿ: ಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಮೃತರನ್ನು ರಘು ಅಲಿಯಾಸ್ ಉಮೇಶ್ (34), ರಂಗನಾಥ್ ಮತ್ತು ಹೇಮಂತ್ ಎಂದು ಪೊಲೀಸರು ಗುರುತಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಶಂಕರಘಟ್ಟದಲ್ಲಿರುವ ವಿಶ್ವವಿದ್ಯಾಲಯ ಶ್ರೀಮದ್ ರಂಭಾಪುರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕರು, ಸಿಬ್ಬಂದಿಯನ್ನು ಬಸ್ ಕರೆದೊಯ್ಯುತ್ತಿತ್ತು. ಏಪ್ರಿಲ್ 26ರಂದು ದಾಂಡೇಲಿ ಮತ್ತು ಹೊನ್ನಾವರವನ್ನು ಒಳಗೊಂಡ ಪ್ರವಾಸಕ್ಕಾಗಿ ಅವರು ಹೊರಟಿದ್ದರು. ಮರವಂತೆ ಬೀಚ್ ಬಳಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಬೈಂದೂರಿನಿಂದ ಕುಂದಾಪುರಕ್ಕೆ ಅತಿವೇಗವಾಗಿ ಬಸ್ ತೆರಳುತ್ತಿದ್ದ ಇಂದು ಮಧ್ಯಾಹ್ನ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ, ಬಸ್ ಎಡಕ್ಕೆ ತಿರುಗಿ, ಮೊದಲು ರಸ್ತೆಬದಿಯಲ್ಲಿ ನಿಂತಿದ್ದ ಪೆಟ್ರೋಲಿಯಂ ಟ್ಯಾಂಕರ್‌ಗೆ ಡಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಬಸ್ ಎದುರು ಭಾಗದಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.
ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವೆ ಒದಗಿಸುವವರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಗಾಯಾಳುಗಳನ್ನು ಕುಂದಾಪುರ ಆದರ್ಶ ಆಸ್ಪತ್ರೆ, ಮಣಿಪಾಲ ಆಸ್ಪತ್ರೆ, ಕುಂದಾಪುರ ಸರ್ಕಾರಿ ಆಸ್ಪತ್ರೆ ಮತ್ತು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಚಾಲಕ ಮಂಜುನಾಥ್ ಅವರ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕುಂದಾಪುರ ಡಿವೈಎಸ್‌ಪಿ ಎಚ್.ಡಿ. ಕುಲಕರ್ಣಿ ಮತ್ತು ಇತರ ಅಧಿಕಾರಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



