ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಮೊತ್ತದ ಪರಿಹಾರ ಚೆಕ್ ವಿತರಣೆ!
ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.

ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮವಾಗಿ ಮೃತಪಟ್ಟ 7 ಜನರ ಕುಟುಂಬದ ವಾರಸುದಾರ ಸದಸ್ಯರಿಗೆ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಲಾಗಿದೆ.
ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಇಂದು ನಗರದ ಎಂ.ಜಿ. ರಸ್ತೆಯಲ್ಲಿರುವ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ಕೇಂದ್ರ ನಗರ ಪಾಲಿಕೆ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ ರವರು 5.00 ಲಕ್ಷಗಳ ಮೊತ್ತದ ಚೆಕ್ ನ್ನು ಮೃತರ ಕುಟುಂಬದವರಿಗೆ ವಿತರಿಸಿದರು.
ಈ ವೇಳೆ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.
ಮೃತರ ಕುಟುಂಬದವರಿಗೆ ಸಾಂತ್ವನ: ಮೃತರ ಕುಟುಂಬದವರಿಗೆ ಶಿವಾಜಿನಗರ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಆಯುಕ್ತರಾದ ಹರೀಶ್ ಕುಮಾರ್ ಅವರು ಸಾಂತ್ವನ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



