ರಾಜ್ಯ

ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಗಂಗಾವತಿ ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
ಆರು ಮಂದಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
Published On :

ಕೊಪ್ಪಳ: ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಇಲ್ಲಿನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಅವರು ಶಿಕ್ಷೆ ತೀರ್ಪು ಪ್ರಕಟಿಸಿದರು. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಮೊದಲಿಗೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿಯ ಫೂಟೇಜ್​ಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್, ಅಪರಾಧಿಗಳು ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯ ಬಗ್ಗೆಯೂ ಪರಿಶೀಲನೆ ನಡೆಸಿದರು.

ಗಂಗಾವತಿಯ ರೈಲ್ವೆ ನಿಲ್ದಾಣದ ಬಳಿ ನಡೆದಿದ್ದ ಮಾರುತಿ ಎಂಬ ಯುವಕನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣದಲ್ಲಿ ವೆಂಕಟೇಶ ಪ್ರತ್ಯಕ್ಷ ಸಾಕ್ಷಿಯಾಗಿದ್ದರು. ಅಲ್ಲದೇ ಮಾರುತಿ ಚಿಕಿತ್ಸೆಗೆ ಕೊನೆಯವರೆಗೂ ಬೆಂಬಲವಾಗಿ ನಿಂತಿದ್ದ ಎಂಬ ಕಾರಣಕ್ಕೆ ವೆಂಕಟೇಶನನ್ನು ಕೊಲೆ ಮಾಡಿದ್ದೀರಿ. ಸಭ್ಯ ನಾಗರಿಕ ಸಮಾಜದ ಇಂತಹ ಕೃತ್ಯಗಳನ್ನು ಒಪ್ಪುವುದಿಲ್ಲ. ಅಪರಾಧ ಕೃತ್ಯಗಳ ಹಿನ್ನೆಲೆ ಪರಿಗಣಿಸಿ ಗಲ್ಲು ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದರು.

ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪ್ರಕರಣ ಸಂಬಂಧ ಆರು ಜನ ಅರೋಪಿಗಳನ್ನು ದೋಷಿ ಎಂದು ಈ ಹಿಂದೆ ಕೋರ್ಟ್ ತೀರ್ಪು ನೀಡಿ, ಶಿಕ್ಷೆ ಪ್ರಮಾಣ ಕಾಯ್ದಿರಿಸಿತ್ತು. ಅಂತೆಯೇ ಇಂದು ನ್ಯಾಯಾಧೀಶರು, ಆರು ಜನರಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗಳು ಅಗತ್ಯವಿದ್ದರೆ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ಸಲಹೆಯಲ್ಲಿ ತಿಳಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಸ್. ನಾಗಲಕ್ಷ್ಮಿ ಮಾಹಿತಿ ನೀಡಿದರು.

ಅಕ್ಟೋಬರ್ 7 2025 ರ ತಡರಾತ್ರಿ ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ವೆಂಕಟೇಶ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಹಿಂಬಾಲಿಸಿದ ಯುವಕರ ಗುಂಪು, ದ್ವಿಚಕ್ರ ವಾಹನಕ್ಕೆ ಗುದ್ದಿ ಬೀಳಿಸಿದ್ದರು.

ಬಳಿಕ ಕೆಳಕ್ಕೆ ಬಿದ್ದ ವೆಂಕಟೇಶನ ಮೇಲೆ ಮಾರಕಾಯುಧಗಳಿಂದ ದಾಳಿ ಮಾಡಿ ಮನಬದಂತೆ ಕೊಚ್ಚಿ ಕೊಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೆಂಕಟೇಶನನ್ನು ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಮಧ್ಯರಾತ್ರಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.