ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್ ನನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯನಿರ್ವಾಹಕ ಇಂಜಿನಿಯರ್ ನನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ಜಿಬಿಎ ಆಯುಕ್ತರುಗಳ ಜೊತೆ ಸಭೆ ನಡೆಸಿದ ಸಿದ್ದರಾಮಯ್ಯ, ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದರು.
ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಸೂಚಿಸಿದ ಮುಖ್ಯಮಂತ್ರಿಗಳು, ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದರು. ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದರು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಸೂಚಿಸಿದರು. ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಅವರು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



