ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಚಾರಣೆ ವಿಳಂಬ; ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್
ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ದರ್ಶನ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು 2025ರ ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಆದರೆ, ಎಂಟು ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿಲ್ಲ.
273 ಸಾಕ್ಷಿಗಳ ಪೈಕಿ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದೆ. ಸಾಕ್ಷಿಗಳ ವಿಚಾರಣೆ ವಿಳಂಬ ಆಗುತ್ತಿದೆ. ಇದೇ ರೀತಿಯಾದರೆ ವಿಚಾರಣೆ ಮುಗಿಯಲು ಹಲವು ವರ್ಷ ಬೇಕಾಗುತ್ತದೆ. ಹೀಗಾಗಿ, ಜಾಮೀನು ಮಂಜೂರು ಮಾಡಬೇಕು ಎಂದು ದರ್ಶನ್ ಅವರು ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿಯ ವಿಚಾರಣೆ ಮೇ 5ರಂದು ನಡೆಯಲಿದೆ.
ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಮನವಿ ಮಾಡಿದ್ದಾರೆ.

ಮಲ್ಲಿ ಮಹಾ ಮೋಸಗಾರ, ನಂಬಿಕೆ ದ್ರೋಹಿ: ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ವಿರುದ್ಧ ದಿನಕರ್ ತೂಗುದೀಪ ಕೆಂಡ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


