ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಎಂ.ಕೆ. ಪ್ರಾಣೇಶ್ ರಾಜೀನಾಮೆ
ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದ ಚುನಾವಣೆಯಲ್ಲಿನ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಣೇಶ್ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಮುಖಂಡ ಎಂ.ಕೆ. ಪ್ರಾಣೇಶ್ ಅವರು ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಲ್ಲಿಸಿದ್ದು, ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆ ಮತ್ತು ಶಾಸಕ ಸ್ಥಾನಕ್ಕೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ. ಸದರಿ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಕೋರುತ್ತೇನೆ" ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ 2021ರಲ್ಲಿ ನಡೆದ ಚುನಾವಣೆಯಲ್ಲಿನ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಾಣೇಶ್ ರಾಜೀನಾಮೆ ನೀಡಿದ್ದಾರೆ.
ಗಾಯತ್ರಿ ಶಾಂತೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಈ ಆದೇಶ ಪ್ರಕಟಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



