ಪೊಲೀಸ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ.

ಬೆಂಗಳೂರು: ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ (ಸಿಪಿಸಿ) ನೇಮಕಾತಿ ಪರೀಕ್ಷೆಯಲ್ಲಿ ಧಾರ್ಮಿಕ ಉಡುಪು ಅಥವಾ ಧಾರ್ಮಿಕ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ನಿರ್ಬಂಧ ವಿಧಿಸಲಾಗಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರ್ಮಿಕ ಉಡುಪು ಅಥವಾ ಧಾರ್ಮಿಕ ಆಭರಣ ಧರಿಸಿ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಆದರೆ, ಅಂತಹ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಎರಡೂವರೆ ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಬೇಕು. ತಪಾಸಣೆ ಪೂರ್ಣಗೊಂಡ ಬಳಿಕವೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು.
ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ಅಭ್ಯರ್ಥಿಗಳು ಪರೀಕ್ಷಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮನವಿ ಮಾಡಿದ ಅವರು, ಮೊಬೈಲ್ ಫೋನ್, ಕೈಗಡಿಯಾರ, ಎಲೆಕ್ಟ್ರಾನಿಕ್ ಸಾಧನಗಳು, ಪುಸ್ತಕಗಳು, ಬ್ಯಾಗ್‌ಗಳು ಹಾಗೂ ಇತರೆ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು ಎಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



