AICC: ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆಗೆ ಸ್ಪೀಕರ್, ಪರಿಷತ್ತಿಗೆ ಸಭಾಪತಿ ಹೆಸರು ಪ್ರಕಟ
ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಹೆಸರು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ರಾಜ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಪ್ರಮುಖ ಹುದ್ದೆಗಳಿಗೆ ಅಧಿಕೃತವಾಗಿ ಹೆಸರನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ವಿಧಾನಸಭೆ ಮತ್ತು ಪರಿಷತ್‌ನ ನೂತನ ಅಧ್ಯಕ್ಷರು ಯಾರು?
ವಿಧಾನಸಭೆ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜಿ ಎಸ್ ಪಾಟೀಲ್ ಅವರು ಹಿರಿಯ ಶಾಸಕರಾಗಿದ್ದಾರೆ. ಇದೆ ವೇಳೆ ವಿಧಾನ ಪರಿಷತ್‌ನ ನೂತನ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.
ಉಪಸಭಾಧ್ಯಕ್ಷ ಮತ್ತು ಉಪಸಭಾಪತಿ ಯಾರು?
ವಿಧಾನಸಭೆ ಉಪಸಭಾಧ್ಯಕ್ಷರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಮತ್ತೊಂದೆಡೆ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಹಿರಿಯ ನಾಯಕಿ ಮತ್ತು ಮಾಜಿ ಸಚಿವೆ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷವು ರಾಜ್ಯದ ವಿವಿಧ ವಲಯ ಹಾಗೂ ಸಮುದಾಯಗಳಿಗೆ ಸಮಾನ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಿದೆ ಎನ್ನಲಾಗಿದೆ.

ಬಸವರಾಜ ಹೊರಟ್ಟಿಗೆ ಕೊಕ್?
ಏತನ್ಮಧ್ಯೆ, ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್‌ನ ನೂತನ ಸಭಾಪತಿ ಸ್ಥಾನಕ್ಕೆ ಸಲೀಂ ಅಹ್ಮದ್ ಅವರ ಹೆಸರನ್ನು ಅಂತಿಮಗೊಳಿಸುವ ಮೂಲಕ ಶೀಘ್ರದಲ್ಲೇ ಬಿಜೆಪಿಯ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಕೊಡಬಹುದು. ಅಕಸ್ಮಾತ್, ಹೊರಟ್ಟಿ ರಾಜೀನಾಮೆ ಕೊಡದೇ ಹೋದ್ರೆ ಸದನದಲ್ಲಿ ಹೆಚ್ಚು ಸದಸ್ಯರನ್ನು ಹೊಂದಿರುವ ಕಾರಣ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



