ರಾಜ್ಯ

'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'

ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರಿಸಿದ್ದಾರೆ.

'ಗಾಡ್ ಫಾದರ್ ಇಲ್ಲದ್ದರಿಂದ ಸಚಿವ ಸ್ಥಾನ ತಪ್ಪಿದೆ; ತಲೆ ಹೊಡೆದು ಹಣ ಸಂಪಾದನೆ ಮಾಡಿದವರು ಮೇಲಕ್ಕೆ ಬರ್ತಾರೆ'
ಎಸ್ ಆರ್ ಶ್ರೀನಿವಾಸ್
Published On :

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಅಸಮಾಧಾನಗೊಂಡಿದ್ದು, ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಜನ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಹೇಳುತ್ತಾರೆ. ಆದರೆ ಯಾರು ಹೇಳಬೆಕಿತ್ತೋ ಅವರು ಹೇಳಿಲ್ಲ. ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತರ ಮಗ ಮೇಲೆ ಬರೋದು ಕಷ್ಟ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಯಾರದಾದರೂ ತಲೆ ಹೊಡೆದು ಹಣ ಸಂಪಾದನೆ ಮಾಡಿರಬೇಕು ಅಂಥವರು ಮೇಲಕ್ಕೆ ಬರುತ್ತಾರೆ. ಜಗಳ ಮಾಡಿ ತೆಗೆದುಕೊಳ್ಳಲು ಅದೇನು ನಮ್ಮ ಅಪ್ಪನ ಆಸ್ತಿ ಅಲ್ಲ. ನಮಗೆ ಯೋಗ್ಯತೆ ಇಲ್ಲ ಅಂತಾ ಅರ್ಥ. ನಮಗೆ ಗಾಡ್ ಫಾದರ್ ಇರಲಿಲ್ಲ, ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಬೇಸರದ ನುಡಿಗಳನ್ನಾಡಿದ್ದಾರೆ. .

ರಾಜಕೀಯದ ಹೊಸ ಪಾಠ ಈಗ ಅರ್ಥ ಆಗುತ್ತಿದೆ. ಗುರುತಿಸುತ್ತಾರೆ ಎಂದು ಅಂದುಕೊAಡಿದ್ದೆ. ಈಗ ಎಲ್ಲವೂ ಮೀರಿ ಹೋಗಿದೆ. ಪ್ರಾಮಾಣಿಕತೆಗೆ ಬೆಲೆ ಎಷ್ಟಿದೆ ಅನ್ನೋದು ಈಗ ಜಿಜ್ಞಾಸೆಗೆ ಒಳಪಡಿಸಿದ್ದೇನೆ. ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ. ಅವಕಾಶ ಸಿಗತ್ತೆ ಅಂದುಕೊಂಡಿದ್ದೆ. ಈಗ ಅವಕಾಶ ವಂಚಿತನಾಗಿದ್ದೇನೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಾನೂ ನಿಗಮ ಮಂಡಳಿಗೆ ರಾಜೀನಾಮೆ ಕೊಡುತ್ತೇನೆ. ಕೆಎಸ್‌ಆರ್‌ಟಿಸಿ ನಷ್ಟದಲ್ಲಿ ಇದೆ. ಏನೂ ಸಾಧನೆ ಮಾಡಲು ಆಗಲ್ಲ. ಹಾಗಾಗಿ ನಾನು ನಾಳೆ ಹೋಗಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.