ವಿಜಯನಗರ ಲಾಕ್‌ಅಪ್ ಡೆತ್ ಕೇಸ್: ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸರ ಬಂಧನ
ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೊಸಪೇಟೆ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಠಾಣೆಯಲ್ಲಿ ನಡೆದ 38 ವರ್ಷದ ದಿನಗೂಲಿ ಕಾರ್ಮಿಕನ ಕಸ್ಟಡಿಯಲ್ ಡೆತ್ (ಲಾಕ್‌ಅಪ್ ಡೆತ್) ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಡ್ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಆಗಸ್ಟ್ 3 ರಂದು ಬಂಧನಕ್ಕೊಳಪಡಿಸಲಾಗಿದೆ.
ಬಂಧಿತರನ್ನು ಹೆಡ್ ಕಾನ್‌ಸ್ಟೆಬಲ್ ಇಟಗಿ ರಾಘವೇಂದ್ರ ಮತ್ತು ಪೊಲೀಸ್ ಕಾನ್‌ಸ್ಟೆಬಲ್ ವೆಂಕಟೇಶ್ ಎಂದು ಗುರುತಿಸಲಾಗಿದೆ.
ಹರಪನಹಳ್ಳಿ ಮೂಲದ, ಪ್ರಸ್ತುತ ಹಗರಿಬೊಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದ ಖಲೀಲುಲ್ಲಾ (ಖಲೀಲ್) ಮೃತಪಟ್ಟ ದುರ್ದೈವಿ.
ಮೂಲಗಳ ಪ್ರಕಾರ, ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ದೂರಿನ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಖಲೀಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪೊಲೀಸ್ ಠಾಣೆಗೆ ಕರೆತರುವ ವೇಳೆ ಖಲೀಲ್ ಮತ್ತು ಪೊಲೀಸರ ನಡುವೆ ವಾಗ್ವಾದ ಹಾಗೂ ತಳ್ಳಾಟ ನಡೆದಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಶದಲ್ಲಿದ್ದ ವೇಳೆ ಖಲೀಲ್ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ವೈದ್ಯರು ಅವರನ್ನು ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಈ ಘಟನೆ ಬಳಿಕ ಪೊಲೀಸ್ ಠಾಣೆ ಎದುರು ಖಲೀಲ್ ಕುಟುಂಬಸ್ಥರು ಹಾಗೂ ಸಂಬಂಧಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿ, ಇದು ಕಸ್ಟೋಡಿಯಲ್ ಡೆತ್ ಎಂದು ಆರೋಪಿಸಿ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಕುಟುಂಬದ ಆರೋಪದ ಮೇರೆಗೆ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಬಳಿಕ ಅವರನ್ನು ಬಂಧಿಸಲಾಗಿದೆ.
ಈ ನಡುವೆ ಖಲೀಲ್ ಕುಟುಂಬಸ್ಥರು ಸ್ಥಳೀಯ ತನಿಖೆಯ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದ್ದು, ಸ್ವತಂತ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



