ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ
ಸಿಎಂ ಡಿಕೆ ಶಿವಕುಮಾರ್, ರಣ್ದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿಹೆ ಹರಿಪ್ರಸಾದ್ ಅಸಮಾಧಾನಿತ ಶಾಸಕರ ಮನವೊಲಿಕೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.

ಬೆಂಗಳೂರು: ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇರುವುದಕ್ಕೆ ಅಸಮಾಧಾನಕ್ಕೊಳಗಾಗಿರುವ ಶಾಸಕರೊಂದಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ ಸಭೆ ನಡೆಸಿ ಮನವೊಲಿಕೆಗೆ ಯತ್ನಿಸಿದ್ದಾರೆ.
ಸಿಎಂ ಡಿಕೆ ಶಿವಕುಮಾರ್, ರಣ್ದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಬಿಹೆ ಹರಿಪ್ರಸಾದ್ ಅಸಮಾಧಾನಿತ ಶಾಸಕರ ಮನವೊಲಿಕೆಗೆ ಸರಣಿ ಸಭೆಗಳನ್ನು ನಡೆಸಿದ್ದಾರೆ.
ಶಾಸಕ ಎಂ ಕೃಷ್ಣಪ್ಪ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ, ನಾವೆಲ್ಲ ಒಂದು ಕುಟುಂಬ ಕೃಷ್ಣಪ್ಪ ನಮ್ಮದೇ ಕುಟುಂಬದವರಾಗಿದ್ದಾರೆ. ಕುಟುಂಬದಲ್ಲಿ ಬೇಡಿಕೆ ಇದ್ದೇ ಇರುತ್ತೆ, ಸಮಸ್ಯೆಗಳನ್ನು ಪರಿಹಾರ ಮಾಡಿಕೊಳ್ಳುತ್ತೇವೆ. ಬಿಜೆಪಿ ಇರಿಟೇಟ್ ಆಗೊದ್ ಬೇಕಾಗಿಲ್ಲ. ಕೃಷ್ಣಪ್ಪ ಎಂಎಲ್ಎ ಮಾತ್ರವಷ್ಟೇ ಅಲ್ಲದೇ ಎಂಎಲ್ ಸಿ ಕೂಡ ಆಗಿದ್ದವರಾಗಿದ್ದಾರೆ. ಪ್ರಿಯಕೃಷ್ಣ ಕಾಂಗ್ರೆಸ್ ಭರವಸೆಯ ನಾಯಕರಾಗಿದ್ದಾರೆ. ಪ್ರಿಯಾ ಕೃಷ್ಣ ಸಹ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಹೈಕಮಾಂಡ್ ನಾಯಕರು ಸಿಎಂ ಡಿಕೆ ಶಿವಕುಮಾರ್, ನಾನು ಸೇರಿ ರಾಜ್ಯದ ಮುಖಂಡರು ಅವರೊಂದಿಗೆ ಮಾತನಾಡಿದ್ದೇವೆ ಎಂದು ಹೇಳಿದ್ದಾರೆ.
ಸುರ್ಜೆವಾಲ ಜೊತೆ ಸಭೆಯಲ್ಲಿ ಹೆಚ್ ಕೆ ಪಾಟೀಲ್ ತೀವ್ರ ಅಸಮಾಧಾನ
ಇನ್ನು ಸುರ್ಜೆವಾಲ ಸಚಿವ ಸ್ಥಾನ ವಂಚಿತ ಶಾಸಕ ಹೆಚ್ ಕೆ ಪಾಟೀಲ್ ನಿವಾಸಕ್ಕೂ ಭೇಟಿ ನೀಡಿದ್ದಾರೆ. ಈ ವೇಳೆ ತೀವ್ರ ಅಸಮಾಧಾನ ಹೊರಹಾಕಿರುವ ಹೆಚ್ ಕೆ ಪಾಟೀಲ್, ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಪ್ರಾದೇಶಿಕ ಅಸಮಾನತೆ ಹೋಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಟಿಬಿ ಜಯಚಂದ್ರ ನಿವಾಸಕ್ಕೆ ಬಿಕೆ ಹರಿಪ್ರಸಾದ್ ಭೇಟಿ ನೀಡಿದ್ದು ಮನವೊಲಿಕೆಗೆ ಯತ್ನಿಸಿದ್ದಾರೆ.
ತಪ್ಪಾಗಿದೆ ಸರಿ ಮಾಡ್ತೀವಿ ಅಂತ ಸಿಎಂ ಹೇಳಿದ್ದಾರೆ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ
ಹೈಕಮಾಂಡ್ ನಾಯಕರು, ಸಿಎಂ ಜೊತೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಎಂ ಕೃಷ್ಣಪ್ಪ, ತಪ್ಪಾಗಿದೆ. ಸರಿಪಡಿಸ್ತೀವಿ ಅಂತ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೇಗೆ ಸರಿಪಡಿಸುತ್ತಾರೆ ಗೊತ್ತಿಲ್ಲ. ಏನು ಮಾಡೊಕೆ ಸಾಧ್ಯ ಅದನ್ನು ಮಾಡುತ್ತೇವೆ ಅಂದಿದ್ದಾರೆ, ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ ಎಂದು ಕೃಷ್ಣಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



