ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ KRS ಜಲಾಶಯ ನೀರಿನ ಮಟ್ಟ
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದ ರೈತರಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ಹೊಸ ನಿರೀಕ್ಷೆ ಮೂಡಿದೆ.
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ.
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಕಠಿಣ ಸೂಚನೆ ನೀಡಿತ್ತು. ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ ಎಂದು ರೈತರನ್ನು ಕೈ ಕಟ್ಟಿ ಹಾಕಿತ್ತು.
ಆದರೆ ಈಗ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೆಆರ್‌ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂ ನೀರಿನ ಮಟ್ಟ ಭರಪೂರ 105 ಅಡಿ ತಲುಪಿದೆ.
ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದಾರೆ. ಮುಂಗಾರು ಹಂಗಾಮಿನ ಬೆಳೆಗಳಿಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವ ಬಗ್ಗೆ ಸರ್ಕಾರ ಶೀಘ್ರ ಅಧಿಕೃತ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ನೀರು ಹರಿಸುವಲ್ಲಿ ವಿಳಂಬವಾದರೆ ಬೆಳೆ ನಷ್ಟವಾಗುವ ಆತಂಕ ರೈತರನ್ನು ಕಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



