ಕೈ ತಪ್ಪಿದ ಸಚಿವ ಸ್ಥಾನ: ವಾಲ್ಮೀಕಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಸನಗೌಡ ದದ್ದಲ್ ರಾಜೀನಾಮೆ
ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಸಿಗದೇ ಇರುವುದಕ್ಕೆ ಆಡಳಿತಾರೂಢ ಕಾಂಗ್ರೆಸ್ ನ ಹಲವು ಶಾಸಕರು ತೀವ್ರ ಅಸಮಾಧಾನ ಹೊರಹಾಕಿದ್ದು, ಹಲವರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ರಾಯಚೂರು (Raicur) ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಬಸನಗೌಡ ದದ್ದಲ್ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬಸನಗೌಡ ದದ್ದಲ್, ಹಿಂದುಳಿದ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಗದಿರುವುದು ಬೇಸರ ತಂದಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

'CM ಡಿ.ಕೆ ಶಿವಕುಮಾರ್ ಸೂಚನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ, ಆದ್ರೂ...': ರಾಜೀನಾಮೆ ಬಗ್ಗೆ ಹೊರಟ್ಟಿ ಹೇಳಿದ್ದೇನು?
ನೀತಿ ಆಯೋಗ ಗುರುತಿಸಿರುವ ಮಹತ್ವಾಕಾಂಕ್ಷಿ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಇದ್ದರೂ, ಸಂಪುಟದಲ್ಲಿ ಜಿಲ್ಲೆಗೆ ಅವಕಾಶ ಸಿಗದಿರುವುದು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಬಸನಗೌಡ ದದ್ದಲ್ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


