ರಾಜ್ಯ

Dakshina Kannada: ವಾಲಿಬಾಲ್ ಆಡುತ್ತಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು, Video viral

ಸುರಿಂಜೆ ಆಟದ ಮೈದಾನದಲ್ಲಿ ಲಿಖಿತ್ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಕೋರ್ಟ್‌ನಲ್ಲೇ ಕುಸಿದುಬಿದ್ದಿದ್ದಾನೆ.

Dakshina Kannada: ವಾಲಿಬಾಲ್ ಆಡುತ್ತಲೇ ಕುಸಿದು ಬಿದ್ದು 15 ವರ್ಷದ ಬಾಲಕ ಸಾವು, Video viral
ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಬಾಲಕ ಸಾವು
Published On :

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಸಮೀಪದ ಸುರಿಂಜೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ದಿಢೀರ್ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತ ಬಾಲಕನನ್ನು ಸುರಿಂಜೆಯ ಕೋಟೆ ಬೊಲ್ಲಾರು ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಲಿಖಿತ್ ಅಮೀನ್ ಎಂದು ಗುರುತಿಸಲಾಗಿದೆ.

ಸುರಿಂಜೆ ಆಟದ ಮೈದಾನದಲ್ಲಿ ಲಿಖಿತ್ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡು ಕೋರ್ಟ್‌ನಲ್ಲೇ ಕುಸಿದುಬಿದ್ದಿದ್ದಾನೆ.

ಸಿಸಿಟಿವಿ ದೃಶ್ಯದಲ್ಲಿ ಲಿಖಿತ್ ವಾಲಿಬಾಲ್ ಸರ್ವ್ ಮಾಡಿದ ಬಳಿಕ ಎದುರಾಳಿ ತಂಡದ ಶಾಟ್‌ ಅನ್ನು ಹಿಂತಿರುಗಿಸಲು ನೆಟ್‌ನತ್ತ ಓಡುವಾಗ ದಿಢೀರ್ ಕುಸಿದು ಬಿದ್ದಿದ್ದಾನೆ.

ಇದನ್ನು ನೋಡಿದ ಆಘಾತಕ್ಕೊಳಗಾದ ಇತರ ಆಟಗಾರರು ತಕ್ಷಣ ಆತನತ್ತ ಧಾವಿಸಿದ್ದಾರೆ. ಸ್ಥಳದಲ್ಲಿದ್ದವರು ಕೂಡಲೇ ಲಿಖಿತ್‌ನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ವೈದ್ಯರು ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಆತನನ್ನು ಉಳಿಸಲು ವೈದ್ಯರು ಪ್ರಯತ್ನಿಸಿದರೂ ಫಲಿಸಲಿಲ್ಲ.

ಲಿಖಿತ್ ಸಾವಿಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.