ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಬದ್ಧ: ಸಿಎಂ ಡಿ.ಕೆ ಶಿವಕುಮಾರ್ ಭರವಸೆ!
ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದರು.

ಬೆಂಗಳೂರು: ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗೆ ಜಾಗ ನೀಡಲು ಸರ್ಕಾರ ಬದ್ಧವಾಗಿದೆ. ವಿಧಾನಸೌಧ ಸುತ್ತಮುತ್ತ ಜಾಗ ಹುಡುಕಬೇಕು, ಹೊರ ಭಾಗದಲ್ಲಾದರೆ ದೊಡ್ಡ ಜಾಗ ನೀಡಲು ಸಿದ್ಧ” ಎಂದು ಸಿಎಂ ಡಿ ಕೆ ಶಿವಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.
ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಗೃಹಕಚೇರಿ ಕೃಷ್ಣಾದಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ, ಮಹಿಳೆಯರ ಪ್ರೋತ್ಸಾಹದಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ನಾವು ಚುನಾವಣೆಗೂ ಮುನ್ನ ಮಹಿಳೆಯರ ಹಿತ ಕಾಯಲು ಪ್ರಕಟಿಸಿದ್ದ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ. ಈ ಯೋಜನೆಗಳಿಂದ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದರು.
ನಮ್ಮ ಯೋಜನೆಗಳನ್ನು ರಾಷ್ಟ್ರದಲ್ಲಿ ಬೇರೆ ರಾಜ್ಯಗಳು ಇವುಗಳನ್ನು ಪಾಲನೆ ಮಾಡಿವೆ. ನಮ್ಮ ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ವಾರ್ಷಿಕವಾಗಿ ಖರ್ಚು ಮಾಡುತ್ತಿದೆ. ನಾಗರಿಕರ ಆಸ್ತಿ ದಾಖಲೆಗಳನ್ನು ಡಿಜಿಟಲ್ ಸ್ಕ್ಯಾನ್ ಮಾಡಿಸಿ ದಾಖಲೆಗಳನ್ನು ಸರಿಪಡಿಸಿಕೊಡಲು ನಮ್ಮ ಸರ್ಕಾರ ಮುಂದಾಗಿದೆ. ನಮ್ಮ ಗ್ಯಾರಂಟಿ ದೇಶದ ಗ್ಯಾರಂಟಿಯಾಗಿದೆ ಎಂದು ಹೇಳಿದರು.
ನೀವು ಆಗಾಗ್ಗೆ ಸೇರಿ ಸಂಘಟನೆ ಮಾಡಿಕೊಳ್ಳಿ. ಹೆಣ್ಣು ಮಕ್ಕಳು ಜಗಳ ಮಾತ್ರ ಮಾಡಿಕೊಳ್ಳಬೇಡಿ. ಸ್ಪರ್ಧೆ ಇದ್ದೇ ಇರುತ್ತದೆ. ಈ ದೇಶದಲ್ಲಿ ಬದಲಾವಣೆ ಆಗಬೇಕಾದರೆ ಮಹಿಳೆಯರು ಹಾಗೂ ಯುವಕರಿಂದ ಮಾತ್ರ ಸಾಧ್ಯ ಎಂಬುದು ನನ್ನ ನಂಬಿಕೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಹಿಂದೆ ಮಹಿಳೆಯರಿಗಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆ ಕಾರ್ಯಕ್ರಮ ತಂದಿದೆ. ನಿಮ್ಮ ಸಂಘದಲ್ಲಿ 5,500 ಸದಸ್ಯೆಯರಿದ್ದಾರೆ. ನೀವು ಎಷ್ಟು ಜನ ಇದ್ದೀರೋ ಅರಮನೆ ಮೈದಾನದಲ್ಲಿ ದೊಡ್ಡ ಸಮಾವೇಶ ಮಾಡಿ. ಸರ್ಕಾರದ ವತಿಯಿಂದ ನಿಮಗೆ ಅಗತ್ಯ ಸಹಾಯ ಮಾಡಲಾಗುವುದು ಎಂದು ತಿಳಿಸಿದರು.
ಮುಖ್ಯ ಕಾರ್ಯದರ್ಶಿಗಳು ಕಾನೂನು ಚೌಕಟ್ಟಿನಲ್ಲಿ ಬೇರೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಅವರು ನೀಡು ಶಿಫಾರಸ್ಸು ಮೇಲೆ ತೀರ್ಮಾನ ಮಾಡುತ್ತೇವೆ. ನೀವು ಇಲ್ಲಿ ನನ್ನ ಜೊತೆ ಮಾತನಾಡುವುದು ಮುಖ್ಯವಲ್ಲ. ನಮ್ಮ ಸಂದೇಶವನ್ನು ನೀವು ಎಷ್ಟು ಜನ ಮಹಿಳಾ ಸಿಬ್ಬಂದಿಗೆ ಕಳುಹಿಸುತ್ತೀರಿ ಎಂಬುದು ಮುಖ್ಯ. ಮತ್ತೆ ಈ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು. ಆಗ ಇದಕ್ಕೆ ಬೆಲೆ ಇರುತ್ತದೆ. ಇಲ್ಲವಾದರೆ ಇದಕ್ಕೆ ಬೆಲೆ ಇರುವುದಿಲ್ಲ ಎಂದರು.
ನಾನು ಈ ಹಿಂದೆ ನಾ ನಾಯಕಿ ಕಾರ್ಯಕ್ರಮ ಮಾಡಿದ್ದೆ. ಅಂದರೆ ಪ್ರತಿ ಮಹಿಳೆ ತನ್ನ ಮನೆಯಲ್ಲಿ ನಾಯಕಿಯಾಗಿರುತ್ತಾಳೆ. ಅದು ನಮ್ಮಲ್ಲಿ ಹೆಚ್ಚು ಚಾಲ್ತಿಗೆ ಬರಲಿಲ್ಲ. ಮತ್ತೆ ಇದಕ್ಕೆ ಹೊಸ ರೂಪ ನೀಡಲು ಪ್ರಯತ್ನಿಸುತ್ತೇನೆ. ಮಹಿಳೆಯರಲ್ಲಿ ನಾಯಕತ್ವ ಗುಣ ಬೆಳೆಸಲು ನಾವು ಜಾಗೃತಿ ಮೂಡಿಸಬೇಕು. ಮುಂದೆ ರಾಜಕೀಯದಲ್ಲಿ ಮಹಿಳಾ ಮೀಸಲಾತಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಆಗ ಯಾರು ಏನಾಗುತ್ತಾರೆ ಹೇಳಲು ಸಾಧ್ಯವಿಲ್ಲ. ಮೋಟಮ್ಮ ಅವರು ಸಿಬ್ಬಂದಿಯಾಗಿದ್ದರು. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದರು. ನಾಯಕತ್ವ ಗುಣ ಬೆಳೆಸಿಕೊಳ್ಳಿ, ಸಾಕಷ್ಟು ಅವಕಾಶಗಳಿವೆ. ನಮ್ಮ ಸರ್ಕಾರ ನಿಮ್ಮ ಜತೆ ಇದೆ. ನೀವು ನಮ್ಮ ಸರ್ಕಾರದ ಜತೆ ಇರಬೇಕು ಎಂದು ತಿಳಿಸಿದರು.

ಲಾಲ್ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿ.ಕೆ ಶಿವಕುಮಾರ್ ಚಾಲನೆ! Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


