ಸಂಪುಟ ವಿಸ್ತರಣೆ ಕಿಚ್ಚು: ಬಂಡಾಯ ಶಾಸಕರ ಬೆಂಬಲಗರಿಂದ ಹಲವು ಕಡೆ ಬಂದ್; ಬೀದಿಗಿಳಿದು ಪ್ರತಿಭಟನೆ!
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅತೃಪ್ತ ಶಾಸಕರೊಂದಿಗೆ ಸಮನ್ವಯ ಸಭೆ ನಡೆಸಿದ್ದರೂ, ಗುರುವಾರ ಹಲವು ಕಾಂಗ್ರೆಸ್ ಶಾಸಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಹಲವು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಅತೃಪ್ತ ಶಾಸಕರೊಂದಿಗೆ ಸಮನ್ವಯ ಸಭೆ ನಡೆಸಿದ್ದರೂ, ಗುರುವಾರ ಹಲವು ಕಾಂಗ್ರೆಸ್ ಶಾಸಕರ ಬೆಂಬಲಿಗರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಕೋಲಾರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರಿಗೆ ಸ್ಥಾನ ಸಿಗದಿದ್ದಕ್ಕೆ ಅವರ ಬೆಂಬಲಿಗರು ಬಂಗಾರಪೇಟೆ ಪಟ್ಟಣದಲ್ಲಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಬಂಗಾರಪೇಟೆಯಲ್ಲಿ ವಾಣಿಜ್ಯ ಸಂಸ್ಥೆಗಳು ಮತ್ತು ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಎಲ್ಲಾ ಅಗತ್ಯ ಸೇವೆ ಹೊರತುಪಡಿಸಿ ಎಲ್ಲಾ ಅಂಗಡಿಗಳು, ಬಸ್ ಮತ್ತು ಆಟೋರಿಕ್ಷಾ ಇರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಗಾರಪೇಟೆ ಬಂದ್‌ಗೆ ದಲಿತ ಸಂಘಟನೆಗಳು, ವರ್ತಕರ ಸಂಘ, ಆಟೋ ಚಾಲಕರ ಸಂಘ, ರೈತ ಸಂಘ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.
ಬಲಗೈ ಸಮುದಾಯಕ್ಕೆ ಸೇರಿದ ಎಸ್.ಎನ್.ನಾರಾಯಣಸ್ವಾಮಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಂಪುಟದಲ್ಲಿ ಅವಕಾಶ ನೀಡದೆ ಹೈಕಮಾಂಡ್ ಅನ್ಯಾಯ ಮಾಡಿದೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹಾವೇರಿಯಲ್ಲೂ ಪ್ರತಿಭಟನೆ
ಇನ್ನು ಹಾವೇರಿ ಜಿಲ್ಲೆಯ, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಅವರ ಬೆಂಬಲಿಗರು ಬ್ಯಾಡಗಿ-ಹಾವೇರಿ ಮಠದಿಂದ ಮೈಲಾರ ಮಹಾದೇವಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿ, ತಮ್ಮ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಉತ್ತರ ಕರ್ನಾಟಕದ ಕುರುಬ ಸಮುದಾಯದ ಪ್ರಮುಖ ನಾಯಕರೊಬ್ಬರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನಿನ್ನೆ ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಬೆಂಬಲಿಗರು ಮೂರು ತಾಲೂಕುಗಳನ್ನ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




