ರಾಜ್ಯ

ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ; ಐವರು ವಿದ್ಯಾರ್ಥಿಗಳ ಬಂಧನ!

ರ‍್ಯಾಗಿಂಗ್ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ, ಹಲ್ಲೆಗೆ ಸಂಬಂಧಿಸಿದ ಹೆಚ್ಚುವರಿ ಆರೋಪಗಳನ್ನು ಕೂಡ ಪ್ರಕರಣದಲ್ಲಿ ಸೇರಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ; ಐವರು ವಿದ್ಯಾರ್ಥಿಗಳ ಬಂಧನ!
ಸಾಂದರ್ಭಿಕ ಚಿತ್ರ
Published On :

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಕಾಲೇಜು ಆವರಣದ ಒಳಗೆ ಮತ್ತು ಹೊರಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶ್ರೀನಿವಾಸ ಖಾಸಗಿ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿಗಳು ಕಾಲೇಜಿನ ಒಳಗೆ ಅಷ್ಟೇ ಅಲ್ಲ, ಹೊರಗೆ ತಮ್ಮ ರೂಮಿಗೆ ಕರೆದೊಯ್ದು ಕಿರುಕುಳ ಕೊಡ್ತಿದ್ದಾರೆ ಎಂದು ಜೂನಿಯರ್ಸ್​ ಆರೋಪ ಮಾಡ್ತಿದ್ದಾರೆ. ಈ ಸಂಬಂಧ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳು ನೀಡಿದ ದೂರಿನ ಮೇರೆಗೆ, ರ‍್ಯಾಗಿಂಗ್ ವಿರೋಧಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ.

ರ‍್ಯಾಗಿಂಗ್ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವುದರಿಂದ, ಹಲ್ಲೆಗೆ ಸಂಬಂಧಿಸಿದ ಹೆಚ್ಚುವರಿ ಆರೋಪಗಳನ್ನು ಕೂಡ ಪ್ರಕರಣದಲ್ಲಿ ಸೇರಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ದೂರುದಾರರ ಪ್ರಕಾರ, ಜೆಪ್ಪು ಪ್ರದೇಶದ ಗುಜರೆಕೆರೆ ಕೆರೆಯ ಸಮೀಪವಿರುವ ಚಹಾ ಅಂಗಡಿಯೊಂದರ ಬಳಿ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ತಮ್ಮ ಮೇಲೆ ಹಲ್ಲೆ ನಡೆಸಿದೆ. ನೀವು ಶೂ ಧರಿಸಬಾರದು" ಎಂದು ವಿನಾಕಾರಣ ಡ್ರೆಸ್ ಕೋಡ್ ಹೇರಲು ಯತ್ನಿಸಿದೆ. ಜೂನಿಯರ್‌ಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಸೀನಿಯರ್ಸ್ ಕಡೆಯಿಂದ ತೀವ್ರ ಹಲ್ಲೆ ನಡೆದಿದೆ. ಹಲ್ಲೆಗೊಳಗಾದ ಸಂತ್ರಸ್ತ ವಿದ್ಯಾರ್ಥಿಗಳು ಹಾಗೂ ಹಲ್ಲೆ ನಡೆಸಿದ ಆರೋಪಿಗಳು ಕೇರಳ ಮೂಲದವರು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.

ತಮ್ಮ ಖಾಸಗಿ ರೂಮ್​​ ಗೆ ಕರೆದುಕೊಂಡು ಹೋಗುವ ಸೀರಿಯರ್ ಸ್ಟೂಡೆಂಟ್ಸ್​ ಅಲ್ಲೇ ಬಟ್ಟೆ ಬಿಚ್ಚಿಸಿ ಕೇವಲ ಒಳ ಉಡುಪಿನಲ್ಲಿ ಕೂರಿಸಿ ಹಿಂಸೆ ನೀಡ್ತಿದ್ದಾರೆ ಎಂದು ಕೆಲ ವಿದ್ಯಾರ್ಥಿಗಳು ದೂರಿದ್ದಾರೆ. ಕರೆದಾಗ ರೂಮ್​​ಗೆ ಹೋಗದೆ ಇದ್ದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸ್ತಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ.

ಹೀಗಾಗಿ, ತನಿಖಾಧಿಕಾರಿಗೆ ಪ್ರಕರಣದಲ್ಲಿ ರ‍್ಯಾಗಿಂಗ್ ನಿರೋಧಕ ಕಾಯ್ದೆಯ (Ragging Sections) ಸೂಕ್ತ ಕಲಂಗಳನ್ನು ಸೇರ್ಪಡೆಗೊಳಿಸಿ, ಬಂಧಿತರನ್ನು ಮ್ಯಾಜಿಸ್ಟ್ರೇಟ್‌ ಎದುರು ಹಾಜರುಪಡಿಸಲು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.