ಆಗಸ್ಟ್ 7 ರಂದು ನಮ್ಮ ಮೆಟ್ರೋ Green Line ಸೇವೆಯಲ್ಲಿ ತಾತ್ಕಾಲಿಕ ಬದಲಾವಣೆ
ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಪಾಸಣೆಗೆ ಪೂರ್ವಭಾವಿಯಾಗಿ BMRCL, CMRS ಅಧಿಕಾರಿಗಳ ತಂಡದಿಂದ ಆ.07 ರಂದು ಪ್ರಾಯೋಗಿಕ ಸಂಚಾರ ನಡೆಯಲಿದೆ.

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದ ಸೇವೆಯಲ್ಲಿ ಆ.07 ರಂದು ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ನೂತನ ರೈಲುಗಳ ಸೇರ್ಪಡೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮೆಟ್ರೋ ರೈಲು ಸುರಕ್ಷತಾ ಆಯುಕ್ತರ ತಪಾಸಣೆಗೆ ಪೂರ್ವಭಾವಿಯಾಗಿ BMRCL, CMRS ಅಧಿಕಾರಿಗಳ ತಂಡದಿಂದ ಆ.07 ರಂದು ಪ್ರಾಯೋಗಿಕ ಸಂಚಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ಹಸಿರು ಮಾರ್ಗದ ಸೇವೆಯಲ್ಲಿ ಬದಲಾವಣೆಯಾಗಲಿದೆ.

ನಮ್ಮ ಮೆಟ್ರೋ ದರ ವಿವಾದ ತಾರಕಕ್ಕೆ: BMRCL ಲೆಕ್ಕಾಚಾರಕ್ಕೆ ಪ್ರಯಾಣಿಕರ ಅಸಮಾಧಾನ; ಶುಲ್ಕ ಪರಿಷ್ಕರಣೆಗೆ ಒತ್ತಾಯ
ಯಶವಂತಪುರದಿಂದ ಮಾದಾವರದವರೆಗಿನ (ಅಪ್ ಲೈನ್) ರೈಲು ಸೇವೆಗಳು ರಾತ್ರಿ 10:30 ರಿಂದ 11:00 ಗಂಟೆಯವರೆಗೆ, ಪ್ರಯಾಣಿಕ ಸೇವೆ ಮುಕ್ತಾಯಗೊಳ್ಳುವವರೆಗೆ, ನಿಯಮಿತ 10 ನಿಮಿಷಗಳ ಬದಲಾಗಿ 20 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ. ಮಾದಾವರದಿಂದ ರೇಷ್ಮೆ ಸಂಸ್ಥೆಯವರೆಗಿನ (ಡೌನ್ ಲೈನ್) ರೈಲು ಸೇವೆಗಳು ವೇಳಾಪಟ್ಟಿಯಂತೆ ಮುಂದುವರಿಯಲಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


