ರಾಜ್ಯ

ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!

ಮೃತ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ರಕ್ಷಣ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಹಾಸ್ಟೆಲ್ ರೂಂನಲ್ಲಿ IISc ವಿದ್ಯಾರ್ಥಿ ಆತ್ಮಹತ್ಯೆ; ಸ್ಥಳದಲ್ಲಿ ಡೆತ್ ನೋಟ್ ಪತ್ತೆ!
ಐಐಎಸ್ ಸಿ
Published On :

ಬೆಂಗಳೂರು: ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್( ಐಐಎಸ್ಸಿ)ನ ಹಾಸ್ಟೆಲ್ ಕೊಠಡಿಯಲ್ಲಿ 19 ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ರಕ್ಷಣ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣ್ ಅವರ ಕೋಣೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿರುವ ವಿಷಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶೈಕ್ಷಣಿಕ ಒತ್ತಡದಿಂದಾಗಿ ಅವರು ತೀವ್ರ ಒತ್ತಡದಲ್ಲಿದ್ದರೇ ಅಥವಾ ಆತ್ಮಹತ್ಯೆಗೆ ಇತರ ಬೇರೆ ಯಾವುದೇ ಕಾರಣವಿದೆಯೇ ಎಂದು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಗುರುವಾರ ಬೆಳಗ್ಗೆ ರಕ್ಷಣ್ ಅವರು ತಮ್ಮ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಂತರ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.

ಮರಣೋತ್ತರ ಪರೀಕ್ಷೆಯ ನಂತರ, ಶವವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅವರ ಕುಟುಂಬ ಯಾವುದೇ ಆರೋಪಗಳನ್ನು ಮಾಡಿಲ್ಲ ಅಥವಾ ಯಾವುದೇ ದುಷ್ಕೃತ್ಯದ ಬಗ್ಗೆ ಶಂಕೆ ವ್ಯಕ್ತಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.